Chikkodi

ಶಾಸಕ ಗಣೇಶ ಹುಕ್ಕೇರಿಗೆ ಎಚ್ಚರಿಕೆ ನೀಡಿದ ರೈತ ಸಂಘ ಉಪಾಧ್ಯಕ್ಷ ಸತ್ಯಪ್ಪ ಮಲ್ಲಾಪೂರೆ

Share

ಚಿಕ್ಕೋಡಿ ಪಟ್ಟಣದಲ್ಲಿ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಜಮೀನು ಕಳೆದುಕೊಳ್ಳುತ್ತಿರುವ ರೈತರಿಗೆ ಸರ್ಕಾರ ಸೂಕ್ತ ಹಾಗೂ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿ ಜುಲೈ 30 ರಂದು ಬೃಹತ್ ಪ್ರತಿಭಟನೆ‌ ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನಾ ಸ್ಥಳಕ್ಕೆ ಸ್ಥಳೀಯ ಶಾಸಕ ಗಣೇಶ್ ಹುಕ್ಕೇರಿ ಅವರು ಆಗಮಿಸಿ ರೈತರ ಕುಂದುಕೊರತೆ ಆಲಿಸದಿದ್ದರೆ ಅವರ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಉಪಾಧ್ಯಕ್ಷ ಸತ್ಯಪ್ಪಾ ಮಲ್ಲಾಪೂರೆ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕೋಡಿ ತಾಲೂಕಿನ ಹಾಲಟ್ಟಿ ಆಯೋಜಿಸಲಾಗಿದ್ದ ರೈತರ ಶಾಲು ದೀಕ್ಷಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡುತ್ತಿದ್ದರು.ಭೂಸ್ವಾಧೀನದಿಂದಾಗಿ ರೈತರು ತಮ್ಮ ಜೀವನೋಪಾಯದ ಮೂಲವನ್ನೇ ಕಳೆದುಕೊಳ್ಳುತ್ತಿದ್ದು, ಸರ್ಕಾರ ನಿಗದಿಪಡಿಸಿರುವ ಪರಿಹಾರ ಮೊತ್ತ ಅತ್ಯಲ್ಪವಾಗಿದೆ. ರೈತರ ಹಿತ ಕಾಯಬೇಕಾದ ಶಾಸಕರು ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ನ್ಯಾಯ ಒದಗಿಸಿಕೊಡಬೇಕು. ಜುಲೈ 30 ರಂದು ನಡೆಯುವ ಪ್ರತಿಭಟನೆಯಲ್ಲಿ ಶಾಸಕರು ಖುದ್ದಾಗಿ ಭಾಗವಹಿಸಿ ರೈತರ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ, ಉಗ್ರ ಹೋರಾಟ ರೂಪಿಸುವುದರ ಜೊತೆಗೆ ಶಾಸಕರ ವಿರುದ್ಧ ಬಹಿರಂಗವಾಗಿ ದಿಕ್ಕಾರ ಕೂಗಲಾಗುವುದು ಎಂದು ಅವರು ಈ ಸಂದರ್ಭದಲ್ಲಿ ಎಚ್ಚರಿಸಿದರು.

ಬೈಟ್-ಸತ್ಯಪ್ಪ ಮಲ್ಲಾಪೂರೆ,ರೈತ ಸಂಘದ ಉಪಾಧ್ಯಕ್ಷ

Tags:

error: Content is protected !!