Dharwad

ಮಂಜುನಾಥ ಮಕ್ಕಳಗೇರಿ ಅಭಿಮಾನಿಗಳು, ಸೇವಾ ಭಾರತಿ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ಶಿಬಿರ..

Share

ಗ್ರಾಮೀಣ ಭಾಗದ ಜನರು ಮತ್ತು ಶಾಲಾ ಮಕ್ಕಳ ಆರೋಗ್ಯ ರಕ್ಷಣೆ ಇಂದಿನ ದಿನಮಾನಗಳಲ್ಲಿ ಹೆಚ್ಚಿನ ಕಾಳಜಿ ಅವಶ್ಯವಿದ್ದು, ಜನ ಮನೆಯ ಆಹಾರ ಸೇವನೆಗೆ ಹೆಚ್ಚು ಆದ್ಯತೆ ನೀಡಬೇಕು ಎಂದು ಬಿಜೆಪಿ ಮುಖಂಡ ಮಂಜುನಾಥ ಮಕ್ಕಳಗೇರಿ ಕತೆ ನೀಡಿದರು.

ಧಾರವಾಡ ತಾಲ್ಲೂಕಿನ ಕರಡಿಗುಡ್ಡ ಗ್ರಾಮದ ಸರ್ಕಾರಿ ಶಾಲೆ ಹಾಗೂ ಗ್ರಾಮದೇವಿ ದೇವಸ್ಥಾನದ ಆವರಣದಲ್ಲಿ ಮಂಜುನಾಥ ಮಕ್ಕಳಗೇರಿ ಅಭಿಮಾನಿ ಬಳಗ ಮತ್ತು ಸೇವಾ ಭಾರತಿ ಟ್ರಸ್ಟ್ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಮಕ್ಕಳು ಬೇಕರಿ ಉತ್ಪನ್ನಗಳಿಗೆ ಹಾಗೂ ಜಂಕ್ ಫುಡ್‌ಗಳಿಗೆ ಮಾರುಹೋಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಸದೃಢ ಶರೀರ ಮತ್ತು ಆರೋಗ್ಯವಂತ ಜೀವನಕ್ಕಾಗಿ ಮಕ್ಕಳು ಬೇಕರಿ ಉತ್ಪನ್ನಗಳನ್ನು ತಿನ್ನುವುದನ್ನು ಸಂಪೂರ್ಣವಾಗಿ ನಿಲ್ಲಿಸಬೇಕು. ಪೋಷಕರು ಮತ್ತು ಮಕ್ಕಳು ಮನೆಯಲ್ಲಿಯೇ ತಯಾರಿಸಿದ ತಾಜಾ ಹಾಗೂ ಪೌಷ್ಟಿಕ ಆಹಾರವನ್ನು ಸೇವಿಸಲು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಶಾಲಾ ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದನ್ನು ತಡೆಗಟ್ಟಬೇಕಾದರೆ ನಾವು ಮೊದಲು ನಮ್ಮ ಸಾಂಪ್ರದಾಯಿಕ ಆಹಾರ ಪದ್ಧತಿಯನ್ನು ಬದಲಾಯಿಸಿಕೊಳ್ಳಬೇಕಾಗಿದೆ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆಯಿಂದ ಮಾತ್ರ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ ಎಂದರು. ಇನ್ನೂ ಉಚಿತ ಆತೋಗ್ಯ ತಪಾಸಣೆಯು ಯಶಸ್ವಿಯಾಗಿ ಜರುಗಿದ್ದು, ಗ್ರಾಮಸ್ಥರು ಶಿಬಿರಕ್ಕೆ ಬಂದು ತಮ್ಮ ಆರೋಗ್ಯ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಪಡೆದುಕೊಂಡು.

Tags:

error: Content is protected !!