gokak

ಗೋಕಾಕ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಬೈಕ್ ಕಳ್ಳರ ಬಂಧನ

Share

ಜಿಲ್ಲೆಯ ಗೋಕಾಕ ಗ್ರಾಮೀಣ ಪೊಲೀಸ್ ಠಾಣೆ ಪೊಲೀಸರು ಬೈಕ್ ಕಳ್ಳತನ ಪ್ರಕರಣವನ್ನು ಭೇದಿಸಿ, ಕಳ್ಳತನದಲ್ಲಿ ಭಾಗಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳ ವಿಚಾರಣೆ ವೇಳೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಿಂದ ಕಳುವಾಗಿದ್ದ ಒಟ್ಟು 8 ಮೋಟಾರ್ ಸೈಕಲ್‌ಗಳನ್ನು ಜಪ್ತಿ ಮಾಡಲಾಗಿದೆ.

ಮುತ್ತಪ್ಪ @ ಮುತ್ತು ಬೆಳಗಲಿ ಹಾಗೂ ಯಮನಪ್ಪ ಯಲ್ಲಪ್ಪ ದೊಡಮನಿ ಬಂಧಿತ ಆರೋಪಿಗಳು. ಬಂಧಿತರಿಂದ ಜಪ್ತಿ ಮಾಡಲಾದ ವಾಹನಗಳ ಒಟ್ಟು 4 ಲಕ್ಷ ರೂಪಾಯಿಗಳಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಯಶಸ್ವಿ ಕಾರ್ಯಾಚರಣೆಯನ್ನು ಗೋಕಾಕ ಗ್ರಾಮೀಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದಿಂದ ನಡೆಸಿದ್ದು, ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ಮುಂದುವರಿದಿದೆ.

Tags:

error: Content is protected !!