Athani

ಸಾಲ ಮನ್ನಾ ಕುರಿತು ಸರ್ಕಾರ ಗಂಭೀರ ಚಿಂತನೆ ನಡೆಸಿದೆ: ಅಥಣಿ ಶಾಸಕ ಲಕ್ಷ್ಮಣ ಸವದಿ ಬಿಗ್ ಹಿಂಟ್!

Share

ರಾಜ್ಯದ ಅನ್ನದಾತರಿಗೆ ಸರ್ಕಾರ ಶೀಘ್ರದಲ್ಲೇ ಭರ್ಜರಿ ಸಿಹಿ ಸುದ್ದಿ ನೀಡುವ ಸಾಧ್ಯತೆ ದಟ್ಟವಾಗಿದೆ. ರೈತರ ಸಾಲ ಮನ್ನಾ ಮಾಡುವ ಕುರಿತು ಮುಖ್ಯಮಂತ್ರಿಗಳು ಗಂಭೀರವಾಗಿ ಚಿಂತನೆ ನಡೆಸುತ್ತಿದ್ದಾರೆ ಎಂದು ಮಾಜಿ ಡಿಸಿಎಂ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಮಹತ್ವದ ಸುಳಿವು ನೀಡಿದ್ದಾರೆ.

ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ರೈತರ ಸಾಲ ಮನ್ನಾ ವಿಚಾರದ ಕುರಿತು ಅಥಣಿ ಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸುತ್ತಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಗುಲ್ಬರ್ಗಾದಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿಗಳು, ಸಾಲ ಮನ್ನಾ ಪ್ರಕ್ರಿಯೆಯನ್ನು ಪರಿಶೀಲಿಸುವುದಾಗಿ ಭರವಸೆ ನೀಡಿದ್ದಾರೆ. ನಾಳೆಯೇ ಮುಖ್ಯಮಂತ್ರಿಗಳು ಬೆಳಗಾವಿಗೆ ಆಗಮಿಸುತ್ತಿದ್ದು, ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳುವ ಸಾಧ್ಯತೆಯಿದೆ ಎಂದು ಸವದಿ ಆಶಾವಾದ ವ್ಯಕ್ತಪಡಿಸಿದ್ದಾರೆ.

ರಾಜ್ಯದ ವಿವಿಧೆಡೆ ಉಂಟಾಗಿರುವ ಬೆಳೆ ಹಾನಿ ಕುರಿತು ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿ ಯಾವ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ ಮತ್ತು ರೈತರು ಎದುರಿಸುತ್ತಿರುವ ಸಂಕಷ್ಟಗಳೇನು ಎಂಬುದನ್ನು ಸೂಕ್ಷ್ಮವಾಗಿ ಪರಿಶೀಲಿಸಿ ಸರ್ಕಾರ ಸೂಕ್ತ ಆರ್ಥಿಕ ನೆರವು ಹಾಗೂ ಪರಿಹಾರ ನೀಡಲು ಬದ್ಧವಾಗಿದೆ ಎಂದು ಶಾಸಕ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸರ್ಕಾರದ ಈ ನಡೆ ಸದ್ಯ ಇಡೀ ರಾಜ್ಯದ ರೈತ ಸಮುದಾಯದಲ್ಲಿ ಹೊಸ ಭರವಸೆಯನ್ನು ಮೂಡಿಸಿದೆ.

Tags:

error: Content is protected !!