Khanapur

ಖಾನಾಪುರದಲ್ಲಿ ವಿಜೃಂಭಣೆಯಶಿವಶರಣ ಹಡಪದ ಅಪ್ಪಣ್ಣ ಜಯಂತಿ: ಶಾಸಕ ವಿಠ್ಠಲರಾವ್ ಹಲಗೇಕರ್ ಭಾಗಿ!

Share

ಖಾನಾಪುರದ ತಹಶೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ೧೨ ನೇ ಶತಮಾನದ ಶ್ರೇಷ್ಠ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಶಾಸಕ ವಿಠ್ಠಲರಾವ್ ಹಲಗೇಕರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ, ಅಪ್ಪಣ್ಣನವರ ವಚನಗಳು ಹಾಗೂ ಸಾಮಾಜಿಕ ಸಮತೆಯ ವಿಚಾರಗಳು ಇಂದಿನ ಸಮಾಜಕ್ಕೂ ದಾರಿದೀಪವಾಗಿವೆ ಎಂದು ಸ್ಮರಿಸಿದರು.

ಖಾನಾಪುರ ತಹಶೀಲ್ದಾರ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮಕ್ಕೆ ಶಾಸಕ ವಿಠ್ಠಲರಾವ್ ಹಲಗೇಕರ್ ಹಾಗೂ ಉಪಸ್ಥಿತರಿದ್ದ ಗಣ್ಯರು ಜ್ಯೋತಿ ಬೆಳಗಿಸಿ, ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ಹಲಗೇಕರ್, ಹಡಪದ ಅಪ್ಪಣ್ಣನವರು ೧೨ ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಸಮಾನತೆ, ಸೋದರತೆ ಮತ್ತು ಕಾಯಕದ ಮಹತ್ವವನ್ನು ಸಾರಿದ ಮಹಾನ್ ಶರಣರೆಂದು ಬಣ್ಣಿಸಿದರು. ಕಾರ್ಯಕ್ರಮದಲ್ಲಿ ಶ್ರೀ ಶ್ರೀ ಸ್ವಾಮಿ ಅಡವಿ ಸಿದ್ಧೇಶ್ವರ ಹಾಗೂ ತಹಶೀಲ್ದಾರ್ ದುಡಪ್ಪ ಕೊಮಾರ ಮಾತನಾಡಿ, ಹಡಪದ ಸಮಾಜದ ಏಳಿಗೆಗೆ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದೇ ವೇಳೆ ಬಿಜೆಪಿ ಮುಖಂಡರಾದ ಮಲ್ಲಪ್ಪ ಮಾರಿಹಾಳ, ಸೋಮಶೇಖರ ನಾವಲಗಿ ಸೇರಿದಂತೆ ಹಡಪದ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಕರೆ ನೀಡಿದರು.

Tags:

error: Content is protected !!