ರಾಯಬಾಗ ಪಟ್ಟಣದಲ್ಲಿ ಇಂದು ನಡೆದ ಇಂದಿರಾ ಕ್ಯಾಂಟೀನ್ ಉದ್ಘಾಟನಾ ಸಮಾರಂಭದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಕೆಲಕಾಲ ವಾಗ್ವಾದ ನಡೆಯಿತು.


ಕಾರ್ಯಕ್ರಮವನ್ನು ಪ್ರೊಟೋಕಾಲ್ ಪ್ರಕಾರ ನಡೆಸಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು. ಈ ವಿಚಾರವಾಗಿ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.ಈ ಕಾರ್ಯಕ್ರಮದಲ್ಲಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ,ಶಾಸಕ ದುರ್ಯೋಧನ ಐಹೊಳೆ ಉಪಸ್ಥಿತರಿದ್ದರು.
ನಂತರ ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳು ಹಾಗೂ ಹಿರಿಯರು ಮಧ್ಯಪ್ರವೇಶಿಸಿ ಎರಡೂ ಪಕ್ಷಗಳ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಇದಾದ ಬಳಿಕ ಕಾರ್ಯಕ್ರಮವು ಮುಂದುವರಿಯಿತು.
