Belagavi

ಹಿರೇಬಾಗೇವಾಡಿ: ಜೂಜಾಟದ ಅಡ್ಡೆ ಮೇಲೆ ಪೋಲಿಸರ ದಿಢೀರ್ ದಾಳಿ, 10 ಜನರ ಬಂಧನ – ಲಕ್ಷಕ್ಕೂ ಹೆಚ್ಚು ಹಣ ಜಪ್ತಿ!

Share

ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಜೂಜಾಟದ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಶಗಣಿಮಟ್ಟಿ ಲೀಫ್ ಫಾರ್ಮ್ ಹತ್ತಿರ ಹಣವಿಟ್ಟು ಇಸ್ಪೀಟ್ ಆಡುತ್ತಿದ್ದ ಅಡ್ಡಡೆಯ ಮೇಲೆ ದಾಳಿ ನಡೆಸಿರುವ ಪೊಲೀಸರು, 10 ಜನ ಆರೋಪಿಗಳನ್ನು ಬಂಧಿಸಿ, ಲಕ್ಷಕ್ಕೂ ಅಧಿಕ ಹಣವನ್ನು ವಶಕ್ಕೆ ಪಡೆದಿದ್ದಾರೆ.

ದಿನಾಂಕ 26-07-2026 ರಂದು ಹಿರೇಬಾಗೇವಾಡಿ ಪೊಲೀಸ್ ಠಾಣೆಯ ಪಿಐ ಶ್ರೀ ನಂದೀಶ್ವರ ಕುಂಬಾರ ಹಾಗೂ ಪಿಎಸ್ಐ ಶ್ರೀ ಅವಿನಾಶ್ ವೈ ಅವರ ನೇತೃತ್ವದ ಸಿಬ್ಬಂದಿ ತಂಡವು ಶಗಣಿಮಟ್ಟಿ ಲೀಫ್ ಫಾರ್ಮ್ ಬಳಿ ಸಾರ್ವಜನಿಕ ಸ್ಥಳದಲ್ಲಿ ‘ಅಂದರ್ ಬಾಹರ್’ ಜೂಜಾಟವಾಡುತ್ತಿದ್ದ ಸ್ಥಳದ ಮೇಲೆ ದಿಢೀರ್ ದಾಳಿ ನಡೆಸಿದೆ. ಕಾರ್ಯಾಚರಣೆ ವೇಳೆ ಚೇತನ, ಸಂತೋಷ್, ರಂಜಾನ, ಇಸ್ಮಾಯಿಲ್ ಸೇರಿದಂತೆ ಒಟ್ಟು 10 ಜನ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರಿಂದ ₹1,22,016/- ನಗದು ಹಣ, ಇಸ್ಪೀಟ್ ಎಲೆಗಳು ಹಾಗೂ ಪ್ಲಾಸ್ಟಿಕ್ ತಟ್ಟೆಯನ್ನು ಜಪ್ತಿ ಮಾಡಲಾಗಿದೆ. ದಾಳಿ ವೇಳೆ ಸಚಿನ್ ಶಿಂಧೆ ಎಂಬ ಮತ್ತೊಬ್ಬ ಆರೋಪಿ ಪರಾರಿಯಾಗಿದ್ದು, ಈ ಸಂಬಂಧ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Tags:

error: Content is protected !!