Chikkodi

ಸತತ ಮಳೆಗೆ ಕುಸಿದ ಮನೆಯ ಗೋಡೆ: ಕೂದಲೆಳೆ ಅಂತರದಲ್ಲಿ 7 ಜನರ ಜೀವ ರಕ್ಷಣೆ

Share

ಕಳೆದ ಕೆಲವು ದಿನಗಳಿಂದ ಬಿಡುದೇ ಸುರಿಯುತ್ತಿರುವ ಭಾರಿ ಮಳೆಗೆ ಮನೆಯೊಂದರ ಗೋಡೆ ಕುಸಿದು ಬಿದ್ದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೋಡಕುರುಳಿ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ನಿವಾಸಿ ಗಂಗವ್ವಾ ವರಾಳೆ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಸತತ ಮಳೆಯಿಂದಾಗಿ ಸಂಪೂರ್ಣವಾಗಿ ಗೋಡೆಗಳು ಶೀಥಿಲಗೊಂಡಿದವು. ಘಟನೆ ನಡೆದ ಸಮಯದಲ್ಲಿ ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ಕುಳಿತು ಊಟ ಮಾಡುತ್ತಿದ್ದರು. ಈ ವೇಳೆ ಇದ್ದಕ್ಕಿದ್ದಂತೆ ಮನೆಯ ಗೋಡೆ ಕುಸಿದು ಬಿದ್ದಿದೆ.

ಗೋಡೆ ಕುಸಿಯುವ ಮುನ್ಸೂಚನೆ ಸಿಗುತ್ತಿದ್ದಂತೆ ಎಚ್ಚೆತ್ತ ಮನೆಯಲ್ಲಿದ್ದ ಏಳು ಜನರು ತಕ್ಷಣವೇ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಇದರಿಂದಾಗಿ ಮನೆಯಲ್ಲಿದ್ದ ಏಳು ಜನರೂ ಯಾವುದೇ ಪ್ರಾಣಾಪಾಯವಿಲ್ಲದೆ ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೂದಲೆಳೆ ಅಂತರದಲ್ಲಿ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.

ಘಟನೆಯಿಂದಾಗಿ ಮನೆಗೆ ಭಾರಿ ಹಾನಿಯಾಗಿದ್ದು, ಬಡ ಕುಟುಂಬ ಬೀದಿಗೆ ಬಿದ್ದಂತಾಗಿದೆ. ಸ್ಥಳಕ್ಕೆ ಸ್ಥಳೀಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ತೊಂದರೆಗೊಳಗಾದ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಡಿ.ಕೆ‌.ಉಪ್ಪಾರ ಇನ್ ನ್ಯೂಸ್ ಚಿಕ್ಕೋಡಿ

Tags:

error: Content is protected !!