Belagavi

ಮುಂಬರುವ ದಿನಗಳಲ್ಲಿ ಮಂತ್ರಿ ಆಗಿಯೇ ಆಗ್ತೇನೆ

Share

ಮುಂಬರುವ ದಿನಗಳಲ್ಲಿ ಮಂತ್ರಿ ಆಗಿಯೇ ಆಗ್ತೇನೆ. ರಾಜಕೀಯದಲ್ಲಿ ಜಾತಿಗಿಂತ ಪಕ್ಷ ನಿಷ್ಠೆಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಮದುರ್ಗ ಶಾಸಕ ಅಶೋಕ್ ಪಟ್ಟಣ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮದುರ್ಗ ಶಾಸಕ ಅಶೋಕ್ ಪಟ್ಟಣ್, ಜಿಲ್ಲೆಯ ಅಭಿವೃದ್ಧಿ, ಬರ ಪರಿಸ್ಥಿತಿ ಮತ್ತು ಕುಡಿಯುವ ನೀರಿನ ಸಮಸ್ಯೆಗಳ ನಿವಾರಣೆಗೆ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಂಡಿದ್ದಾರೆ ಎಂದು ತಿಳಿಸಿದರು. ಇದೇ ವೇಳೆ ಸಚಿವ ಸಂಪುಟ ವಿಸ್ತರಣೆಯ ಕುರಿತು ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಬೆಳಗಾವಿ ಜಿಲ್ಲೆಗೆ ಕನಿಷ್ಠ ಮೂರರಿಂದ ನಾಲ್ಕು ಸಚಿವ ಸ್ಥಾನಗಳು ಸಿಗುವ ಸಾಧ್ಯತೆ ಇದೆ. ಈ ಬಗ್ಗೆ ಮುಖ್ಯಮಂತ್ರಿಗಳು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ತಮಗೂ ಸಚಿವ ಸ್ಥಾನ ಸಿಗುವ ಪೂರ್ಣ ವಿಶ್ವಾಸವಿದೆ ಎಂದು ಆಶಾಭಾವನೆ ವ್ಯಕ್ತಪಡಿಸಿದರು.

ರಾಜಕೀಯದಲ್ಲಿ ಜಾತಿಗಿಂತ ಪಕ್ಷ ನಿಷ್ಠೆಗೆ ಮೊದಲ ಆದ್ಯತೆ ನೀಡಬೇಕು ಎಂದು ಪ್ರತಿಪಾದಿಸಿದ ಅವರು, ಇತ್ತೀಚಿನ ದಿನಗಳಲ್ಲಿ ಉಪಜಾತಿಗಳ ರಾಜಕಾರಣ ಹೆಚ್ಚಾಗುತ್ತಿರುವುದು ತಮಗೆ ಹಿನ್ನಡೆಯಾಗಿ ಪರಿಣಮಿಸಿದೆ ಎಂದು ಬೇಸರ ಹಂಚಿಕೊಂಡರು. ತಾವು ಮೊದಲಿನಿಂದಲೂ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರೊಂದಿಗೆ ಉತ್ತಮ ಸ್ನೇಹ ಬಾಂಧವ್ಯ ಹೊಂದಿದ್ದು, ಪಕ್ಷಕ್ಕಾಗಿ ದುಡಿದ ಹಿರಿಯ ಶಾಸಕರಿಗೆ ಸಚಿವ ಸ್ಥಾನ ಸಿಗಬೇಕು ಎನ್ನುವುದು ತಮ್ಮ ಆಗ್ರಹವಾಗಿದೆ ಎಂದರು. ಸಚಿವ ಸಂಪುಟ ವಿಸ್ತರಣೆಯು ಶೀಘ್ರದಲ್ಲೇ ನಡೆಯಲಿದ್ದು, ನಿಷ್ಠಾವಂತರಿಗೆ ಸೂಕ್ತ ಸ್ಥಾನಮಾನ ಸಿಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Tags:

error: Content is protected !!