Dharwad

ಧಾರವಾಡದಲ್ಲಿ ಚಾಲಕನ ನಿಯಂತ್ರಣ ತಪ್ಪಿ BRTS ರಸ್ತೆಯ ಬ್ಯಾರಿಕೆಡ್ ಗೆ ಇಕೋ ಕಾರ್ ಡಿಕ್ಕಿ ….ತಪ್ಪಿ ಬಾರಿ ಅನಾಹುತ.

Share

ಧಾರವಾಡದ ಕೋರ್ಟ್ ಸರ್ಕಲ್ ಬಳಿ ವೇಗವಾಗಿ ಬಂದ ಇಕೋ ಕಾರವೊಂದು brts ರಸ್ತೆಯ ಬ್ಯಾರಿಕೆಡ್ ಗೆ ಡಿಕ್ಕಿ ಹೊಡೆದ ಘಟನೆ ಕಳೆದ ದಿನ ರಾತ್ರಿ ನಡೆದಿದ್ದು, ಕಾರ್ ಮುಂಭಾಗ ನಜ್ಜು ಗುಜ್ಜಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು, ಅದೃಷ್ಟಶಾತ್ ಯಾವದೇ ಪ್ರಾಣ ಹಾನಿ ಸಂಭವಿಸಿಲ್ಲ, ಕಾರ್ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಇನ್ನೂ ಸ್ಥಳಕ್ಕೆ ದೌಡಯಿಸಿದ ಧಾರವಾಡ ಸಂಚಾರಿ ಠಾಣೆಯ ಪೊಲೀಸರು ಕಾರ್ ನ್ನು ಹೊರ ತೆಗೆಯಲು ಹರಸಾಹಸ ಪಡುವ ಸ್ಥಿತಿ ನಿರ್ಮಾಣವಾಗಿತ್ತು. ಧಾರವಾಡ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಗಾಯಾಳುಗಳ ಕುರಿತು ಮಾಹಿತಿ ಲಭ್ಯವಾಗಬೇಕಿದೆ.

Tags:

error: Content is protected !!