Vijaypura

ಕೋಟ್ಯಾಳದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನದ ಸಿಎಸ್ ಆರ್ ಅನುದಾನದಡಿ ಉನ್ನತೀಕರಿಸಿದ ಪ್ರೌಢ ಶಾಲಾ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ, ಸಚಿವ ಎಂ ಬಿ‌ ಪಾಟೀಲ ಅವರಿಂದ ಲೋಕಾರ್ಪಣೆ…

Share

 

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ ನಿರ್ಮಿಸಲಾದ ಸುಸಜ್ಜಿತ ನೂತನ ಸರ್ಕಾರಿ ಪ್ರೌಢ ಶಾಲಾ ಕಟ್ಟಡವನ್ನು ಬೃಹತ್‌ ಮತ್ತು ಮದ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಂ ಬಿ ಪಾಟೀಲ್ ಅವರು ಸಸಿಗೆ ನೀರುಣಿಸುವ ಮೂಲಕ ವಿದ್ಯುಕ್ತವಾಗಿ ಲೋಕಾರ್ಪಣೆಗೊಳಿಸಿದರು.

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಮಾತನಾಡಿದ ಸಚಿವ ಎಂ ಬಿ ಪಾಟೀಲ ವಿಜಯಪುರ ಜಿಲ್ಲೆಯ ಕೋಟ್ಯಾಳ ಗ್ರಾಮದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರತಿಷ್ಠಾನ ಮತ್ತು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಸಂಸ್ಥೆಗಳ ಸಿ.ಎಸ್.ಆರ್ ಅನುದಾನದಡಿ 3.25 ಕೋಟಿ ರೂಪಾಯಿ ವೆಚ್ಚದಲ್ಲಿ, ಸುಸಜ್ಜಿತ ಶಾಲಾ ಕಟ್ಟಡ ನಿರ್ಮಾಣಗೊಂಡಿದ್ದು, ಕೋಟ್ಯಾಳ ಸುತ್ತಮುತ್ತಲಿನ ಗ್ರಾಮಗಳ ನೂರಾರು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಮತ್ತು ಆಧುನಿಕ ಕಲಿಕಾ ವಾತಾವರಣವನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ ಎಂದರು.

ಜಗತ್ತಿನಲ್ಲಿ‌ ದೊಡ್ಡದಾದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತನ್ನ ಆದಾಯದ ಮರುಹೂಡಿಕೆ ಮಾಡಿದ ಏಕೈಕ ವಿಮಾನ ನಿಲ್ದಾಣವಾಗಿದೆ. ಆ ಲಾಭಾಂಶದಲ್ಲಿ ಸಮಾಜಮುಖಿ ಕಾರ್ಯ ನಿರ್ವಹಿಸುವುದರಲ್ಲಿ ಸದಾ ಮುಂದಿರುವ ಈ ಸಂಸ್ಥೆ, ಕೋಟ್ಯಾಳದಲ್ಲಿ ಗುಣಮಟ್ಟದ ಹಾಗೂ ಸುಂದರ ಶಾಲಾ ಕಟ್ಟಡ ನಿರ್ಮಿಸಿಕೊಟ್ಟಿದೆ. ಗ್ರಾಮೀಣ ಪ್ರತಿಭೆಗಳಿಗೆ ಈ ಶಾಲಾ ಕಟ್ಟಡ ಅನುಕೂಲವಾಗಲಿದ್ದು, ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೂ ಹೆಚ್ಚು ಒತ್ತು ನೀಡಿದರೆ, ಗ್ರಾಮೀಣ ಬಾಲಕಿಯರಿಗೆ ಈ ಶಾಲೆ ಭವಿಷ್ಯದ ದಿನಗಳಲ್ಲಿ ವರದಾನವಾಗಲಿದೆ ಎಂದರು. ಹೆಣ್ಣು ಮಕ್ಕಳನ್ನು ಪೋಷಕರು ಕಡ್ಡಾಯವಾಗಿ ಶಾಲೆಗೆ ಕಳುಹಿಸಿಕೊಡಬೇಕು.

ಭವಿಷ್ಯದ ದಿನಗಳಲ್ಲಿ ಅವರು ಇಂಜಿನೀಯರ್ ಹಾಗೂ ವೈದ್ಯರು ಒಳಗೊಂಡಂತೆ ಉನ್ನತ ಹುದ್ದೆಗೇರಿ ಉಜ್ವಲ ಭಾರತ ನಿರ್ಮಾಣಕ್ಕೆ ಕೈಜೋಡಿಸಲಿ ಎಂದರು. ಈ ಸಂದರ್ಭದಲ್ಲಿ ನಾಡಪ್ರಭು ಕೆಂಪೇಗೌಡ ವಿಮಾನ ನಿಲ್ದಾಣದ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಡಾ.ಹರಿ ಮರಾರ್, ಮುಖ್ಯ ಹಣಕಾಸು ಅಧಿಕಾರಿ ಭಾಸ್ಕರ ಆನಂದರಾವ್, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಸವರಾಜ ತಳವಾರ, ಕೃಷ್ಣಾ ಕಾಡಾ ಮಾಜಿ ಅಧ್ಯಕ್ಷ ಜಕ್ಕಪ್ಪ ಯಡವೆ, ಜಿ.ಪಂ. ಮಾಜಿ ಅಧ್ಯಕ್ಷರಾದ ಸೋಮನಾಥ ಬಾಗಲಕೋಟ, ಆನಂದರಾವ್ ಕುಲಕರ್ಣ, ಅನೀಲಕುಮಾರ ಪಾಟೀಲ, ವಿ.ಎಸ್ ಪಾಟೀಲ ಸೇರಿದಂತೆ ಹಲವು ಗಣ್ಯರು ಗ್ರಾಮಸ್ಥರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು…

 

Tags:

error: Content is protected !!