Uncategorized

ಕೃಷ್ಣಾ ನದಿಗೆ ಹೆಚ್ಚಿದ ಒಳಹರಿವು: 2ನೇ ಬಾರಿಗೆ ಜಲಾವೃತಗೊಂಡ ಯಡೂರ-ಕಲ್ಲೋಳ ಸೇತುವೆ

Share

ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ಪಶ್ಚಿಮ ಘಟ್ಟಗಳ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೃಷ್ಣಾ ನದಿಯ ನೀರಿನ ಮಟ್ಟದಲ್ಲಿ ತೀವ್ರ ಏರಿಕೆಯಾಗಿದೆ. ಇದರ ಪರಿಣಾಮವಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರ-ಕಲ್ಲೋಳ ಗ್ರಾಮಗಳನ್ನು ಸಂಪರ್ಕಿಸುವ ಸೇತುವೆಯು ಎರಡನೇ ಬಾರಿಗೆ ಸಂಪೂರ್ಣವಾಗಿ ಜಲಾವೃತಗೊಂಡಿದೆ.

ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಪ್ರಸ್ತುತ ಕಲ್ಲೋಳ ನದಿ ತೀರದಲ್ಲಿ ಸುಮಾರು 60 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ನದಿಯ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ.

ಸೇತುವೆ ಜಲಾವೃತಗೊಂಡ ಹಿನ್ನೆಲೆಯಲ್ಲಿ ಯಡೂರ ಮತ್ತು ಕಲ್ಲೋಳ ನಡುವಿನ ನೇರ ರಸ್ತೆ ಸಂಪರ್ಕ ಕಡಿತಗೊಂಡಿದೆ. ಸಾರ್ವಜನಿಕರ ಮತ್ತು ವಾಹನ ಸವಾರರ ಸುರಕ್ಷತೆಯ ದೃಷ್ಟಿಯಿಂದ ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಹಾಗೂ ಸ್ಥಳೀಯರು ಪರ್ಯಾಯ ಮಾರ್ಗಗಳನ್ನು ಬಳಸುವಂತೆ ಸೂಚಿಸಲಾಗಿದೆ.ಸ್ಥಳೀಯ ಅಧಿಕಾರಿಗಳು ನದಿಯ ಹರಿವಿನ ಮೇಲೆ ನಿರಂತರ ನಿಗಾ ವಹಿಸಿದ್ದಾರೆ.

Tags:

error: Content is protected !!