Raibag

ಕಬ್ಬೂರ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಲೋಕಾರ್ಪಣೆ: ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಚಾಲನೆ

Share

ರಾಯಬಾಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕಬ್ಬೂರ ಪಟ್ಟಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಇಂದಿರಾ ಕ್ಯಾಂಟೀನ್ ಅನ್ನು ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಉದ್ಘಾಟನೆಯ ಬಳಿಕ ಮಾತನಾಡಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಕಬ್ಬೂರ ಪಟ್ಟಣದಲ್ಲಿ ಆರಂಭವಾಗಿರುವ ಈ ಇಂದಿರಾ ಕ್ಯಾಂಟೀನ್‌ನಿಂದ ಸ್ಥಳೀಯ ನಿವಾಸಿಗಳಿಗೆ ಮಾತ್ರವಲ್ಲದೆ, ಸುತ್ತಮುತ್ತಲಿನ ಗ್ರಾಮೀಣ ಭಾಗದ ಜನರಿಗೂ ತುಂಬಾ ಅನುಕೂಲವಾಗಲಿದೆ. ಕ್ಯಾಂಟೀನ್‌ನ ಸಿಬ್ಬಂದಿಗಳು ಸಾರ್ವಜನಿಕರಿಗೆ ಅತ್ಯಂತ ರುಚಿಕರ ಮತ್ತು ಗುಣಮಟ್ಟದ ಆಹಾರವನ್ನು ಪೂರೈಸಬೇಕು. ಎಲ್ಲಕ್ಕಿಂತ ಹೆಚ್ಚಾಗಿ ಕ್ಯಾಂಟೀನ್ ಆವರಣದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು” ಎಂದು ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಸಕ ದುರ್ಯೋಧನ ಐಹೊಳೆ ಅವರು ಮಾತನಾಡಿ ಅತ್ಯಂತ ಕಡಿಮೆ ದರದಲ್ಲಿ ಗುಣಮಟ್ಟದ ಆಹಾರ ಇಂದಿರಾ ಕ್ಯಾಂಟೀನ್‌ಗಳಲ್ಲಿ ಲಭ್ಯವಿದ್ದು, ಸಾರ್ವಜನಿಕರು ಹಾಗೂ ಶ್ರಮಿಕ ವರ್ಗದವರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು” ಎಂದು ಕರೆ ನೀಡಿದರು.

ಬಳಿಕ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹಾವೀರ ಮೊಹಿತೆ ಅವರು ಮಾತನಾಡಿ, ರಾಜ್ಯದ ಯಾವುದೇ ಬಡವರು ಹಸಿವಿನಿಂದ ಬಳಲಬಾರದು ಉದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದ ಅತ್ಯಂತ ಮಹತ್ವಾಕಾಂಕ್ಷೆಯ ಯೋಜನೆ ಇಂದಿರಾ ಕ್ಯಾಂಟೀನ್ ಆಗಿದೆ. ಈ ಭಾಗದ ಜನರಿಗೆ ಇದು ವರದಾನವಾಗಲಿದೆ ಎಂದರು.

ಈ ಸಂದರ್ಭದಲ್ಲಿ ಶಿವನಗೌಡ ಪಾಟೀಲ, ಮಂಜುನಾಥ ಘೇವಾರಿ, ಸುರೇಶ ಬೆಲ್ಲದ, ಮಹಾಲಿಂಗ ಹಂಜಿ, ಮಂಜುನಾಥ ಮುರಾಳೆ, ಅಬ್ಬಾಸ ಮಹಾಲಿಂಗ ಕಾಮಗೋಳ ಹಾಗೂ ಕಬ್ಬೂರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಇಂದ್ರವ್ವಾ ಶಿಂಗೆ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಪ್ರಮುಖರು ಮತ್ತು ಸಾರ್ವಜನಿಕರು ಉಪಸ್ಥಿತರಿದ್ದರು.

Tags:

error: Content is protected !!