ರಾಯಬಾಗ ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಸಮಾರಂಭದ ಸಂದರ್ಭದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರ ನಡುವೆ ತೀವ್ರ ಮಾತಿನ ಚಕಮಕಿ ಮತ್ತು ಜಟಾಪಟಿ ನಡೆದಿರುವ ಘಟನೆಗೆ ಸಂಬಂಧಿಸಿದಂತೆ ರಾಯಬಾಗ ತಾಲೂಕಿನ ನಸಲಾಪೂರ ಗ್ರಾಮದಲ್ಲಿ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಸಮಾರಂಭದಲ್ಲಿ ನಡೆದ ಗೊಂದಲದ ಕುರಿತು ಮಾತನಾಡಿ ಪ್ರೋಟೋಕಾಲ್ ಪ್ರಕಾರವೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಿಯಮಾವಳಿಗಳ ಅನ್ವಯ ಸ್ಥಳೀಯ ಶಾಸಕರಾದ ದುರ್ಯೋಧನ ಐಹೊಳೆ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು ಎಂದು ಸ್ಪಷ್ಟಪಡಿಸಿದರು.
ಮುಂದುವರಿದು ಮಾತನಾಡಿದ ಅವರು, “ಉದ್ಘಾಟನಾ ಸ್ಥಳದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಉಭಯ ಪಕ್ಷಗಳ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದಿದೆ.ಆದರೆ ಇಂತಹ ಸಣ್ಣಪುಟ್ಟ ಗೊಂದಲಗಳ ನಡುವೆಯೂ ಸಾರ್ವಜನಿಕ ಹಿತದೃಷ್ಟಿಯಿಂದ ಹಮ್ಮಿಕೊಳ್ಳಲಾಗಿದ್ದ ನಮ್ಮ ಇಂದಿರಾ ಕ್ಯಾಂಟಿನ್ ಉದ್ಘಾಟನಾ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನೆರವೇರಿದೆ ಎಂದು ತಿಳಿಸಿದರು.
ಉದ್ಘಾಟನೆಗೊಂಡ ಇಂದಿರಾ ಕ್ಯಾಂಟಿನ್ನಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಸಂಸದರು ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆಯಲು ಯತ್ನಿಸಿದ್ದಾರೆ.
