Chikkodi

ಜೂಡೋ ಸ್ಪರ್ಧೆ: ಕೆ.ಕೆ. ಸಿಬಿಎಸ್ಇ ಶಾಲೆಯ ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆ

Share

ಇತ್ತೀಚೆಗೆ ಮಹಾರಾಷ್ಟ್ರದ ಪುಣೆಯಲ್ಲಿ ಜರುಗಿದ ಸಿಬಿಎಸ್ಇ ದಕ್ಷಿಣ ವಲಯದ ಜೂಡೋ ಚಾಂಪಿಯನ್‌ಶಿಪ್‌ ಸ್ಪರ್ಧೆಯಲ್ಲಿ ಇಲ್ಲಿನ ಸಿ.ಎಲ್.ಇ ಸಂಸ್ಥೆಯ ಕೆ.ಕೆ. ಸಿಬಿಎಸ್ಇ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಶಾಲೆಗೆ ಹಾಗೂ ರ‍್ಯಾಂಕಿಂಗ್ ಕ್ಷೇತ್ರಕ್ಕೆ ಕೀರ್ತಿ ತಂದಿದ್ದಾರೆ.

ಸ್ಪರ್ಧೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಸಿಂಚನಾ ಮಾಳಗೆ ಹಾಗೂ ಒಂಬತ್ತನೇ ತರಗತಿಯ ದಿಯಾ ಲಡಗೆ ಅವರು ಬೆಳ್ಳಿ ಪದಕ ಪಡೆದುಕೊಂಡು ರಾಷ್ಟ್ರಮಟ್ಟದ ಜೂಡೋ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಇದೇ ಸ್ಪರ್ಧೆಯಲ್ಲಿ ಶಾಲೆಯ ವಿದ್ಯಾರ್ಥಿಗಳಾದ ಸಮರ್ಥ ಕಿಲಾರೆ, ವರುಣ ಹಂಜಿ ಹಾಗೂ ದಿಯಾ ಹಲಬಾವಿ ಅವರು ತೀವ್ರ ಪೈಪೋಟಿಯ ನಡುವೆ ಕಂಚಿನ ಪದಕ ಗೆದ್ದು ಸಾಧನೆ ಮೆರೆದಿದ್ದಾರೆ. ಜೊತೆಗೆ ಧ್ರುವ ಕೋಳಿ ಹಾಗೂ ವರ್ಷಿನಿ ಬಸ್ತವಾಡೆ ಅವರು ಸ್ಪರ್ಧೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಗಮನ ಸೆಳೆದಿದ್ದಾರೆ.

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಹಾಗೂ ಪದಕ ವಿಜೇತ ವಿದ್ಯಾರ್ಥಿಗಳಿಗೆ ಸಿ.ಎಲ್.ಇ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಎಮ್. ಕವಟಗಿಮಠ, ನಿರ್ದೇಶಕ ಮಲ್ಲಿಕಾರ್ಜುನ ಜೆ. ಕವಟಗಿಮಠ, ಆಡಳಿತಾಧಿಕಾರಿ ಸಾಗರ ಐ. ಬಿಸ್ಕೋಪ್ ಹಾಗೂ ಪ್ರಾಚಾರ್ಯೆ ಸ್ಮೀತಾ ಎನ್. ಶಿಂಧೆ ಅಭಿನಂದನೆ ಸಲ್ಲಿಸಿ, ಮುಂದಿನ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.

Tags:

error: Content is protected !!