Khanapur

ಖಾನಾಪುರ: ಕನ್ನಡ ಶಾಲೆಗಳ ಉಳಿವಿಗಾಗಿ ಕರವೇ ಸ್ವಾಭಿಮಾನಿ ಸೇನೆಯಿಂದ ಅಂಜಲಿ ನಿಂಬಾಳ್ಕರ್’ಗೆ ಮನವಿ

Share

ಖಾನಾಪುರ ತಾಲೂಕಿನಲ್ಲಿ ಕನ್ನಡ ಶಾಲೆಗಳ ಉಳಿವು ಹಾಗೂ ಅವುಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಕರವೇ ಸ್ವಾಭಿಮಾನಿ ಸೇನೆಯ ತಾಲೂಕು ಘಟಕದ ವತಿಯಿಂದ ಮಾಜಿ ಶಾಸಕಿ ಹಾಗೂ ಎಐಸಿಸಿ ಕಾರ್ಯದರ್ಶಿ ಡಾ. ಅಂಜಲಿ ನಿಂಬಾಳ್ಕರ್ ಅವರಿಗೆ ಇಂದು ವಿಶೇಷ ಮನವಿ ಪತ್ರ ಸಲ್ಲಿಸಲಾಯಿತು.

ಖಾನಾಪುರ ತಾಲೂಕಿನ ಗಡಿ ಭಾಗದಲ್ಲಿ ಕನ್ನಡ ಶಾಲೆಗಳನ್ನು ಸಂರಕ್ಷಿಸುವ ಹಾಗೂ ಶೈಕ್ಷಣಿಕ ಗುಣಮಟ್ಟವನ್ನು ಹೆಚ್ಚಿಸುವ ಕುರಿತು ಕರವೇ ಸ್ವಾಭಿಮಾನಿ ಸೇನೆಯ ಪದಾಧಿಕಾರಿಗಳು ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ್ ಅವರೊಂದಿಗೆ ಸುದೀರ್ಘ ಚರ್ಚೆ ನಡೆಸಿ ಮನವಿ ಸಲ್ಲಿಸಿದರು. ಪದಾಧಿಕಾರಿಗಳಿಂದ ಮನವಿ ಸ್ವೀಕರಿಸಿ ಮಾತನಾಡಿದ ಡಾ. ಅಂಜಲಿ ನಿಂಬಾಳ್ಕರ್ ಅವರು, ಗಡಿ ನಾಡಿನಲ್ಲಿ ಕನ್ನಡ ಭಾಷೆ ಹಾಗೂ ಕನ್ನಡ ಶಾಲೆಗಳ ರಕ್ಷಣೆಗೆ ತಮ್ಮ ಕಡೆಯಿಂದ ಸದಾ ಕಾಲ ಸಂಪೂರ್ಣ ಬೆಂಬಲ, ಸಹಾಯ ಮತ್ತು ಸಹಕಾರ ಇರಲಿದೆ ಎಂಬ ದೃಢ ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕರವೇ ಸ್ವಾಭಿಮಾನಿ ಸೇನೆಯ ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!