ಖಾನಾಪುರ ತಾಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸ್ವಂತ ನಿವೇಶನ ಹೊಂದಿರುವ ಅರ್ಹ ಫಲಾನುಭವಿಗಳು ವಸತಿ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳಲು ಸಮಾಜ ಕಲ್ಯಾಣ ಇಲಾಖೆಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2026-2027ನೇ ಸಾಲಿನ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ, ಖಾನಾಪುರ ತಾಲೂಕಿನ SC/ST ಅಲೆಮಾರಿ ಸಮುದಾಯದ ಸ್ವಂತ ನಿವೇಶನ ಹೊಂದಿರುವ ವಸತಿ ರಹಿತರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅರ್ಹ ಅರ್ಜಿದಾರರು ಖಾನಾಪುರದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ನಿಗದಿತ ಅರ್ಜಿ ನಮೂನೆಯನ್ನು ಪಡೆದುಕೊಂಡು, ಅಗತ್ಯ ದಾಖಲೆಗಳೊಂದಿಗೆ ಜುಲೈ 31, 2026 ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕಾಗಿದೆ. ಹೆಚ್ಚಿನ ವಿವರಗಳಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಖಾನಾಪುರ ಕಚೇರಿಯನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
