Dharwad

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವಿಜಯಪುರ ಜಿಲ್ಲಾ ಸಮಿತಿಯ ಸಭೆ

Share

ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ವಿಜಯಪುರ ಜಿಲ್ಲಾ ಸಮಿತಿಯ ಸಭೆ ಜರುಗಿತು.

ಸಭೆಯಲ್ಲಿ ಇತ್ತೀಚೆಗೆ ನಡೆದ ಅಂಗವಿಕಲರು, ಹಿರಿಯ ನಾಗರಿಕರು ಹಾಗೂ ವಿಧವಾ ಪಿಂಚಣಿಗಾಗಿ ನಡೆದ ಹೋರಾಟದಲ್ಲಿ ಭಾಗವಹಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಲಾಯಿತು. ಈ ವೇಳೆ ಕರ್ನಾಟಕ ರಾಜ್ಯ ಪದವೀಧರರ ಒಕ್ಕೂಟದ ಅಧ್ಯಕ್ಷ ಲಾಯಪ್ಪ ಇಂಗಳೆ ಅವರು ಸಂವಿಧಾನದ 371ಜೆ ಕಲಂ ಕುರಿತು ಮಾಹಿತಿ ನೀಡಿದರು. ವಿಜಯಪುರ ಜಿಲ್ಲೆಯನ್ನು 371ಜೆ ವಿಶೇಷ ಮೀಸಲಾತಿಯಿಂದ ಹೊರಗಿಟ್ಟಿರುವುದು ಜಿಲ್ಲೆಯ ಜನತೆಗೆ ಆಗಿರುವ ಅನ್ಯಾಯವಾಗಿದ್ದು, ಇದಕ್ಕಾಗಿ ನಿರಂತರ ಹೋರಾಟ ನಡೆಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಧ್ಯಕ್ಷ ವಿನೋದ ಎಂ. ಖೇಡ್, ಉಪಾಧ್ಯಕ್ಷ ಮಲ್ಲಿಕಾರ್ಜುನ ಉಮ್ರಾಣಿ, ರಮೇಶ್ ಬಿರಾದಾರ, ಲೋಕನಾಥ ಸರೋಡಿ, ಸಂತೋಷ ಕಲಗುಡಿ, ಅಮಣ್ಣ ಗುನ್ನಾಪುರ, ಅನಿಲ ಪವಾರ, ರಫೀಕ್ ಪವಾರ, ರಾಜು ಕುಮಟಗಿ, ರಾಜು ತಡಗಲಿ, ಶಂಕ್ರಮ್ಮ ಕೋರಿ, ಗಣೇಶ ಡೋಣೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:

error: Content is protected !!