ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದ ಕೋಚಿಂಗ್ ಸೆಂಟರ್‌ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಶಿಕ್ಷಕನೇ ಲೈಂಗಿಕ ದೌರ್ಜನ್ಯ ಎಸಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕೃತ್ಯ ಖಂಡಿಸಿ ಬಾಲಕಿಯರ ಪೋಷಕರು ಹಾಗೂ ಸ್ಥಳೀಯರು ಉಗ್ರ ಪ್ರತಿಭಟನೆ ನಡೆಸಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಹಿರಿಯ ಪೊಲೀಸ್ ಅಧಿಕಾರಿಯ ಕಾಲಿಗೆ ಬಿದ್ದು ನಮಸ್ಕರಿಸಿದ ಸಂತ್ರಸ್ತೆಯ ತಾಯಿ, ತಮ್ಮ ಮಗಳಿಗೆ ನ್ಯಾಯ ಕೊಡಿಸುವಂತೆ ಕಣ್ಣೀರಿಡುತ್ತಾ ಆಗ್ರಹಿಸಿದ್ದಾರೆ. ಘಟನೆ ಸಂಬಂಧ ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿತ ಶಿಕ್ಷಕನನ್ನು ವಶಕ್ಕೆ ಪಡೆದಿದ್ದು, ಈ ಕುರಿತು ಗೋಕಾಕ್ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.

