Chikkodi

ಇಂಗಳಿ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯನ್ನು ಅನಾವರಣಗೊಳಿಸಿ ಶಾಸಕ ಸಂತೋಷ ಲಾಡ್

Share

ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮರಾಠ ಸಾಮ್ರಾಜ್ಯದ ಸಂಸ್ಥಾಪಕ, ಛತ್ರಪತಿ ಶಿವಾಜಿ ಮಹಾರಾಜರ ಭವ್ಯ ಮೂರ್ತಿಯನ್ನು ಅತ್ಯಂತ ಅದ್ದೂರಿಯಾಗಿ ಕಲಘಟಗಿ ಶಾಸಕ ಹಾಗೂ ಮಾಜಿ ಕಾರ್ಮಿಕ ಸಚಿವರಾದ ಸಂತೋಷ್ ಲಾಡ್ ಅವರು ಅನಾವರಣಗೊಳಿಸಿದರು.

ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಶಿವಾಜಿ ಮಹಾರಾಜರ ಜಯಘೋಷಗಳು ಮೊಳಗಿದವು. ಪುತ್ಥಳಿ ಅನಾವರಣಕ್ಕೂ ಮುನ್ನ ಸಾಂಪ್ರದಾಯಿಕ ಪೂಜಾ ವಿಧಿವಿಧಾನಗಳು ಜರುಗಿದವು.

ಈ ಐತಿಹಾಸಿಕ ಕ್ಷಣಕ್ಕೆ ಶ್ರೀಶೈಲ ಜಗದ್ಗುರುಗಳಾದ ಡಾ. ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಮಂಜುನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು.

ಕಾರ್ಯಕ್ರಮದಲ್ಲಿ ಪ್ರಮುಖ ರಾಜಕೀಯ ಹಾಗೂ ಸಹಕಾರಿ ಧುರೀಣರು ಪಾಲ್ಗೊಂಡಿದ್ದರು. ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಹಿರಿಯ ಸಹಕಾರಿ ಧುರೀಣರಾದ ಡಾ. ಪ್ರಭಾಕರ ಕೋರೆ ಹಾಗೂ ಮಾಜಿ ಸಚಿವರಾದ ಶ್ರೀಮಂತ ಪಾಟೀಲ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದರು. ಇವರೊಂದಿಗೆ ಸ್ಥಳೀಯ ನಾಯಕರು, ಪ್ರಮುಖರು ಮತ್ತು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿ ಮಹಿಳಾ ರಕ್ಷಣೆ ಹಾಗೂ ರೈತರಿಗೆ ನ್ಯಾಯ ಒದಗಿಸಿದ ಯುಗಪುರುಷ ಶಿವಾಜಿ ಮಹಾರಾಜರ ವಿಚಾರಧಾರೆಗಳು ಇಂದಿನ ಸಮಾಜಕ್ಕೆ ಅತ್ಯಂತ ಅಗತ್ಯವಾಗಿವೆ ಎಂದರು. ಮಾಜಿ ಶಾಸಕ ಮಹಾಂತೇಶ ಕವಟಗಿಮಠ ಮಾತನಾಡಿ ಇದು ಇಂಗಳಿ ಗ್ರಾಮದ ಸುವರ್ಣ ಕ್ಷಣವಾಗಿದ್ದು, ಈ ಪುತ್ಥಳಿ ಯುವ ಪೀಳಿಗೆಗೆ ಮಾರ್ಗದರ್ಶನ ನೀಡಲಿದೆ ಎಂದರು.

ಬೆಂಗಳೂರಿನ ಗೋಸಾಯಿ ಮಹಾಸಂಸ್ಥಾನ ಮಠದ ಶ್ರೀ ಮಂಜುನಾಥ ಮಹಾಸ್ವಾಮಿಗಳು ಹಾಗೂ ಶ್ರೀಶೈಲ ಜಗದ್ಗುರುಗಳು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಸ್ವಾಮೀಜಿಗಳು ಸಮಾಜದ ಪ್ರಗತಿಗಾಗಿ ಸಂಘಟಿತರಾಗಲು ಆಶೀರ್ವಚನ ನೀಡಿದರು.

ಕಾರ್ಯಕ್ರಮದಲ್ಲಿ ಪದ್ಮಶ್ರೀ ಡಾ. ಪ್ರಭಾಕರ್ ಕೋರೆ, ಮಾಜಿ ಶಾಸಕರಾದ ಕೆ.ಪಿ. ಮಗೇಣ್ಣವರ, ಶ್ರೀಮಂತ ಪಾಟೀಲ, ಅಜಿತಸಿಂಗ್ ನಿಂಬಾಳ್ಕರ್, ಪ್ರಮುಖರಾದ ರಾಹುಲ ಘಾಟ್ಗೆ, ಸ್ವರೂಪ್ ಮಹಾಡಿಕ, ರಾಜಾರಾಮ್ ಮಾನೆ, ಶಂಕರ ಪವಾರ್,ಅಣ್ಣಾಸಾಹೇಬ ಪವಾರ, ಸೇರಿದಂತೆ ಹಲವು ಗಣ್ಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

 

Tags:

error: Content is protected !!