ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಜಯಪುರ ಜಿಲ್ಲೆಯ ನಾಗಠಾಣ ಮತಕ್ಷೇತ್ರದ ಶಾಸಕ ವಿಠಲ ಕಟಕದೊಂಡ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ವಿಜಯಪುರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಎಚ್.ಡಿ. ದೇವೇಗೌಡರು ದೇಶದ ಪ್ರಧಾನಿಯಾಗುವ ಹಾದಿಯಲ್ಲಿ ಚೆನ್ನಮ್ಮ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಪ್ರತಿಯೊಬ್ಬ ಯಶಸ್ವಿ ಗಂಡಿನ ಹಿಂದೆ ಹೆಣ್ಣಿನ ಕೈ ಇರುತ್ತದೆ ಎಂಬುದಕ್ಕೆ ಚೆನ್ನಮ್ಮ ಅವರ ಜೀವನವೇ ಅತ್ಯುತ್ತಮ ಉದಾಹರಣೆ ಎಂದು ಅವರು ಹೇಳಿದ್ದಾರೆ. ಚೆನ್ನಮ್ಮ ಅವರ ಅಗಲಿಕೆ ದೇವೇಗೌಡರ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ. ಈ ದುಃಖವನ್ನು ಭರಿಸುವ ಶಕ್ತಿ ದೇವರು ದೇವೇಗೌಡರು ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಶಾಸಕ ವಿಠಲ ಕಟಕದೊಂಡ ಪ್ರಾರ್ಥಿಸಿದ್ದಾರೆ.

