Nippani

ನಿಪ್ಪಾಣಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆಗೋಡೆ ಕುಸಿತ,ಸಾರ್ವಜನಿಕರ ತೀವ್ರ ಆಕ್ರೋಶ

Share

ನಿಪ್ಪಾಣಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಪ್ರಮುಖ ರಸ್ತೆ ಕಾಮಗಾರಿಯ ತಡೆಗೋಡೆ ದಿಢೀರನೆ ಕುಸಿದು ಬಿದ್ದಿದ್ದು, ಗುತ್ತಿಗೆದಾರನ ವಿರುಧ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೋಟ್ಯಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುವ ಮುನ್ನವೇ ತಡೆಗೋಡೆ ಕುಸಿದಿರುವುದು ಕಾಮಗಾರಿಯ ಗುಣಮಟ್ಟವನ್ನು ಎತ್ತಿ ತೋರಿಸುತ್ತಿದ್ದು, ವಾಹನ ಸವಾರರು ಹಾಗೂ ಸ್ಥಳೀಯರಲ್ಲಿ ತೀವ್ರ ಭೀತಿ ಉಂಟುಮಾಡಿದೆ.

ಕೋಟ್ಯಾಂತರ ರೂಪಾಯಿ ಸಾರ್ವಜನಿಕರ ಹಣ ವೆಚ್ಚ ಮಾಡಿ ನಿರ್ಮಿಸುತ್ತಿರುವ ಹೆದ್ದಾರಿಯಲ್ಲಿ ಇಷ್ಟೊಂದು ಬೇಜವಾಬ್ದಾರಿತನದಿಂದ ಕೆಲಸ ಮಾಡಲಾಗಿದೆ. ಗುತ್ತಿಗೆದಾರ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಇಂದು ಬೃಹತ್ ತಡೆಗೋಡೆ ಕುಸಿದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ, ಮುಂದಾಗುವ ಅನಾಹುತಗಳಿಗೆ ಯಾರು ಹೊಣೆ?” ಎಂದು ಸ್ಥಳೀಯರು ಪ್ರಶ್ನಿಸಿದ್ದಾರೆ.

Tags:

error: Content is protected !!