Uncategorized

*NEET ಅಕ್ರಮ ಹಾಗೂ ಶಿಕ್ಷಣ ವ್ಯವಸ್ಥೆ ವೈಫಲ್ಯ: ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ, ರಾಹುಲ್ ಗಾಂಧಿ ಆಕ್ರೋಶ!*

Share

ನೀಟ್ ಪರೀಕ್ಷೆಯ ಅಕ್ರಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ವೈಫಲ್ಯಗಳ ವಿರುದ್ಧ ಸಂಸತ್ ಆವರಣದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ಪರೀಕ್ಷಾ ವ್ಯವಸ್ಥೆಯ ವಿರುದ್ಧ ಕಾಂಗ್ರೆಸ್ ನಾಯಕರು ತೀವ್ರ ವಾಗ್ದಾಳಿ ನಡೆಸಿದರು.

ದೇಶದಲ್ಲಿ ನೀಟ್ ಪರೀಕ್ಷೆಯ ಅಕ್ರಮ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಲು ಸಾಲು ಅವ್ಯವಸ್ಥೆಗಳನ್ನು ಖಂಡಿಸಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮಾಧ್ಯಮಗಳೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, ದೇಶದ ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಯುವಜನರ ಭವಿಷ್ಯಕ್ಕೆ ಯಾವುದೇ ಭದ್ರತೆ ಇಲ್ಲದಂತಾಗಿದ್ದು, ನ್ಯಾಯ ಕೇಳಲು ಹೊರಟ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ದೌರ್ಜನ್ಯ ಎಸಗಲಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಈ ವಿಷಯದ ಕುರಿತು ಸಂಸತ್ತಿನಲ್ಲಿ ಚರ್ಚಿಸಲು ಸ್ಪೀಕರ್ ಅವರ ಬಳಿ ಮನವಿ ಮಾಡಿದರೂ, ಸರ್ಕಾರ ಅನುಮತಿ ನೀಡುತ್ತಿಲ್ಲ ಎಂದು ಸ್ಪೀಕರ್ ತಿಳಿಸಿದ್ದಾರೆ. ದೇಶದ ಯುವಕರ ಭವಿಷ್ಯದ ಕುರಿತು ಪ್ರಧಾನಿ ಮೋದಿ ಮೌನ ವಹಿಸಿರುವುದು ಅಕ್ಷಮ್ಯ ಎಂದು ಆಕ್ರೋಶ ಹೊರಹಾಕಿದ ಅವರು, ಘಟನೆಯ ಹೊಣೆ ಹೊತ್ತು ಶಿಕ್ಷಣ ಸಚಿವರು ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು. ಅಲ್ಲದೆ ಗಾಯಗೊಂಡ ವಿದ್ಯಾರ್ಥಿಗಳನ್ನು ಭೇಟಿಯಾಗುವುದಾಗಿ ಅವರು ಇದೇ ವೇಳೆ ತಿಳಿಸಿದರು.

Tags:

error: Content is protected !!