Chikkodi

ಚಿಕ್ಕೋಡಿಯ ಬಿ.ಕೆ. ಕಾಲೇಜಿನಲ್ಲಿ ಬಿಬಿಎ, ಬಿಸಿಎ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

Share

ಬಿ.ಕೆ. ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಬಿಬಿಎ ಹಾಗೂ ಬಿಸಿಎ ವಿಭಾಗಗಳ ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಓರಿಯಂಟೇಶನ್ (Orientation) ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ನೂತನ ವಿದ್ಯಾರ್ಥಿಗಳು ಹಾಗೂ ಅವರ ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ‘TRIKs’ ಸಂಸ್ಥೆಯ ನಿರ್ದೇಶಕರಾದ ಶ್ರೀ ತುಲಸಿದಾಸ್ ಜಿ. ಅವರು ಮಾತನಾಡಿ ವಿದ್ಯಾರ್ಥಿ ದೆಸೆಯಿಂದಲೇ ಐಎಎಸ್ ಮತ್ತು ಐಪಿಎಸ್‌ನಂತಹ ಉನ್ನತ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೇಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕು ಎಂಬ ಕುರಿತು ಅಮೂಲ್ಯ ಮಾರ್ಗದರ್ಶನ ನೀಡಿದರು. ಅಲ್ಲದೆ, ಇದಕ್ಕೆ ಪೂರಕವಾದ ವಿಶೇಷ ತರಬೇತಿಯನ್ನು ಕಾಲೇಜಿನಲ್ಲಿ ನಾಳೆಯಿಂದಲೇ ಪ್ರಾರಂಭಿಸಲಾಗುವುದು ಎಂದು ಪ್ರಕಟಿಸಿದರು. ಇದೇ ಸಂದರ್ಭದಲ್ಲಿ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ತಮ್ಮ ಯಶಸ್ಸಿನ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ ಹೊಸ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಬಿಬಿಎ-ಬಿಸಿಎ ಸಂಯೋಜಕರಾದ ಡಾ. ಅಮರಬಪಶುಪತಿಮಠ ಅವರು ಮಾತನಾಡಿ ನಮ್ಮ ಕಾಲೇಜಿನಲ್ಲಿ 1 ರಿಂದ 6 ನೇ ಸೆಮಿಸ್ಟರ್‌ನವರೆಗೆ ಪ್ರತಿ ಸೆಮಿಸ್ಟರ್‌ನಲ್ಲೂ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಕುರಿತು 42 ಗಂಟೆಗಳ ವಿಶೇಷ ತರಬೇತಿ ನೀಡಲಾಗುತ್ತದೆ. ಇದರೊಂದಿಗೆ 4 ಸೆಮಿನಾರ್‌ಗಳು, 1 ವರ್ಕ್‌ಶಾಪ್ ಹಾಗೂ 2 ಕೈಗಾರಿಕಾ ಪ್ರವಾಸಗಳನ್ನು ಹಮ್ಮಿಕೊಳ್ಳುವ ಮೂಲಕ ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕಾಗಿ ಸಂಸ್ಥೆ ಶ್ರಮಿಸುತ್ತಿದೆ,” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪಾಲಕರು ಉಪಸ್ಥಿತರಿದ್ದರು.

Tags:

error: Content is protected !!