Belagavi

ಉತ್ತರ ಕರ್ನಾಟಕದ ದೇವಾಲಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು: ಕುಂಚಿಟಿಗರ

Share

ದಕ್ಷಿಣ ಕರ್ನಾಟಕದ ದೇವಾಲಯಗಳ ಮಾದರಿಯಲ್ಲಿ ಉತ್ತರ ಕರ್ನಾಟಕದ ದೇವಾಲಯಗಳನ್ನೂ ಸ್ವಚ್ಛತೆ, ಶಿಸ್ತುಬದ್ಧ ಪೂಜಾ ಪದ್ಧತಿ ಹಾಗೂ ಭಕ್ತಸೇವೆಯ ಮೂಲಕ ಅಭಿವೃದ್ಧಿಪಡಿಸಬೇಕೆಂದು ಕುಂಚಿಟಿಗರ ಸಂಸ್ಥಾನ ಮಠದ ಜಗದ್ಗುರು ಶ್ರೀ ಹನುಮಂತನಾಥ ಮಹಾಸ್ವಾಮೀಜಿ ಹೇಳಿದರು.

ಕರ್ನಾಟಕ ದೇವಾಲಯ ಸಂವರ್ಧನಾ ಸಮಿತಿ ಹಾಗೂ ಶ್ರೀ ಗುರುಶಾಂತೇಶ್ವರ ಜನಕಲ್ಯಾಣ ಪ್ರತಿಷ್ಠಾನ, ಹಿರೇಮಠ-ಹುಕ್ಕೇರಿ ಇವರ ಆಶ್ರಯದಲ್ಲಿ ಬೆಳಗಾವಿಯ ಲಕ್ಷ್ಮೀ ಟೆಕ್ಕಡಿಯಲ್ಲಿರುವ ಶ್ರೀ ಹಿರೇಮಠದಲ್ಲಿ ಜುಲೈ 21ರಿಂದ 28ರವರೆಗೆ ಆಯೋಜಿಸಿರುವ ಎಂಟು ದಿನಗಳ ಅರ್ಚಕರ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಕಾರಂಜಿ ಮಠದ ಪರಮಪೂಜ್ಯ ಶ್ರೀ ಗುರುಸಿದ್ದ ಮಹಾಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ಮುಖ್ಯ ವಕ್ತಾರ ಶ್ರೀ ಮನೋಹರ ಮಠಜಿ ಮಾತನಾಡಿದರು. ಕಾರ್ಯಕ್ರಮದ ನೇತೃತ್ವವನ್ನು ಪೂಜ್ಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮೀಜಿ ವಹಿಸಿದ್ದರು. ಬೆಳಗಾವಿ ಜಿಲ್ಲೆಯ ವಿವಿಧ ಸಮುದಾಯಗಳ ಅರ್ಚಕರನ್ನು ಒಂದೇ ವೇದಿಕೆಗೆ ಕರೆತಂದು ತರಬೇತಿ ಶಿಬಿರ ಯಶಸ್ವಿಗೊಳಿಸಿರುವುದು ಶ್ಲಾಘನೀಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮವನ್ನು ನಗರ ಸಂಘಚಾಲಕ ಬಾಳಣ್ಣ ಕಗ್ಗಣಗಿ ಉದ್ಘಾಟಿಸಿದರು. ಉದ್ಯಮಿ ಪಿ.ಎಸ್. ಹಿರೇಮಠ, ವೈದ್ಯರಾದ ಡಾ. ಎಂ.ಬಿ. ಬೆಲ್ಲದ ಹಾಗೂ ಡಾ. ಕೇದಾರೇಶ್ವರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.

Tags:

error: Content is protected !!