hubbali

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ : ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

Share

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಿಂದಾಗಿ ದೇಶಾದ್ಯಂತ ಸಂಭವಿಸಿದ 21 ವಿದ್ಯಾರ್ಥಿಗಳ ದುರ್ಮರಣಕ್ಕೆ ಕಂಬನಿ ಮಿಡಿದು, ಕೇಂದ್ರ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ ಹೂಬ್ಬಳ್ಳಿಯ ವಿದ್ಯಾ ನಗರದ ಕಿಮ್ಸ್ಗಾಂಧಿ ವೃತ್ತದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾರಿ ಪ್ರತಿಭಟನೆ ನಡೆಸಿದರು.

ವಿವಿಧ ಕಾಲೇಜುಗಳ ಸಾವಿರಾರು ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡು ನೀಟ್ ಅಕ್ರಮದಲ್ಲಿ ಜೀವ ಕಳೆದುಕೊಂಡ 21 ವಿದ್ಯಾರ್ಥಿಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು
ಪ್ರತಿಭಟನೆಯ ನಂತರ ಮಾತನಾಡಿದ ಮುಖಂಡರು, ಕೇಂದ್ರ ಸರ್ಕಾರದ ಬೇಜವಾಬ್ದಾರಿತನದಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಂಚಿಗೆ ಸಿಲುಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರನ್ನು ಬಳಸಿ ದೌರ್ಜನ್ಯ ಎಸಗಿರುವುದನ್ನು ತೀವ್ರವಾಗಿ ಖಂಡಿಸಲಾಯಿತು.

ಈ ಸಂದರ್ಭದಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಅವರ ಪ್ರತಿಕೃತಿಯನ್ನು ದಹನ ಮಾಡಲಾಯಿತು. ಹಾಗೆಯೇ, ದೆಹಲಿಯಲ್ಲಿ ವಿದ್ಯಾರ್ಥಿ ಸಮುದಾಯದ ಮೇಲೆ ಹಲ್ಲೆ ನಡೆಸಿ ದಬ್ಬಾಳಿಕೆ ತೋರಿರುವುದನ್ನು ವಿರೋಧಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗೃಹಮಂತ್ರಿ ಅಮಿತ್ ಶಾ ಅವರ ಪ್ರತಿಕೃತಿಗಳನ್ನೂ ಕೂಡ ದಹಿಸಿ ಆಕ್ರೋಶ ಹೊರಹಾಕಲಾಯಿತು.

ವಿದ್ಯಾರ್ಥಿಗಳ ಮತ್ತು ಯುವ ಸಮುದಾಯದ ಭವಿಷ್ಯದ ಜತೆಗೆ ಚೆಲ್ಲಾಟವಾಡುತ್ತಿರುವ ಕೇಂದ್ರ ಸರ್ಕಾರದ ಧೋರಣೆಯನ್ನು ಖಂಡಿಸಿರುವ ಪ್ರತಿಭಟನಾಕಾರರು, ತಕ್ಷಣವೇ ಪ್ರಧಾನಮಂತ್ರಿ ನರೇಂದ್ರ ಮೋದಿ, ಗೃಹಮಂತ್ರಿ ಅಮಿತ್ ಶಾ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ತಮ್ಮ ಸ್ಥಾನಕ್ಕೆ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಬಲವಾಗಿ ಆಗ್ರಹಿಸಿ ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

Tags:

error: Content is protected !!