ಕೃಷಿ ಇಲಾಖೆಯಲ್ಲಿ ಕೃಷಿ ಅಧಿಕಾರಿ ಹುದ್ದೆಗೆ ಬಿಎಸ್ಸಿ ಹಾಗೂ ಬಿಟೇಕ್ ವಿದ್ಯಾರ್ಥಿಗಳಿಗೆ ಅವಕಾಶ ನೀಡುವ ರುವುದನ್ನು ಖಂಡಿಸಿ ಹಾಗೂ ಈ ನಿರ್ಧಾರ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿ, ಧಾರವಾಡದ ಕೃಷಿ ವಿವಿ ಪ್ರವೇಶ ದ್ವಾರದ ಬಳಿ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.


ಧಾರವಾಡ ಬೆಳಗಾವಿ ರಸ್ತೆಯ ಕೃಷಿ ವಿವಿ ಮುಂಭಾಗದಲ್ಲಿ ಕೃಷಿ ವಿವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ ಸರ್ಕಾರ ಕೃಷಿ ಇಲಾಖೆ ಮುಖ್ಯ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಇಎಯಿಂದ ಅಧಿಸೂಚನೆ ಹೊರಡಿಸಿರುವ 945 ಕೃಷಿ ಅಧಿಕಾರಿ ಹುದ್ದೆ, ಬಿಎಸ್ಸಿ, ಬಿಟೇಕ್ ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಿರುವು ಅತ್ಯಂತ ನಡುವೆ ಒವಿನ ಸಂಗತಿಯಾಗಿದೆ. ಸರ್ಕಾರದ ಈ ನಿರ್ಧಾರ ವಿರೋಧಿಸಿ ಕಳೆದ 13 ದಿನಗಳಿಂದ ಹೋರಾಟ ಮಾಡಲಾಗುತ್ತಿದೆ. ಆದರೆ ಅಧಿಕಾರಿಗಳು ಮತ್ತು ಸರ್ಕಾರದ ಯಾವೊಬ್ಬರು ಸ್ಪಂದನೆ ನೀಡದ ಹಿನ್ನಲೆಯಲ್ಲಿ ಇಂದಿನ ಪ್ರತಿಭಟನೆ ಈಗ ವಿಶ್ವ ವಿದ್ಯಾಲಯದ ಪ್ರವೇಶ ದ್ವಾರಕ್ಕೆ ಬಂದಿದೆ ಎಂದು ಕೃಷಿ ವಿವಿಯಲ್ಲಿ ಒಳಗೆ ಹೋಗುವುವರ ಪ್ರವೇಶಕ್ಕೆ ಅವಕಾಶ ನೀಡದೆ ಪ್ರತಿಭಟನೆ ತೀವ್ರಗೊಳಿಸಿದ ವಿದ್ಯಾರ್ಥಿಗಳು ತಮ್ಮ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು. ಇನ್ನೂ ಪ್ರತಿಭಟನೆ ತೀವ್ರಗೊಳ್ಳುತ್ತಿದಂತೆ ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಎನ್ ಶಶಿಕುಮಾರ ಭೇಟಿ ನೀಡಿ, ವಿದ್ಯಾರ್ಥಿಗಳ ಮನವೊಲಿಸಲು ಮುಂದಾದ್ರೂ, ಆದರೆ ಇದಕ್ಕೆ ಜಗ್ಗದ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರೆಸಿದರು. ಯಾವುದೇ ಅಹಿತಲರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ ಕೈಗೊಳ್ಳಲಾಗಿದೆ
