ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ನಲ್ಲಿ ಶ್ರೀರಾಮ ಜನ್ಮಭೂಮಿ ಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಎಣಿಕೆಯಲ್ಲಿ ನಡೆದಿರುವ ಅಕ್ರಮದ ಘಟನೆಗೆ ಎಲ್ಲರೂ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಉತ್ತರ ಕರ್ನಾಟಕದ ಪ್ರಚಾರ ವಿಭಾಗದ ಪ್ರಮುಖರಾದ ಕೃಷ್ಣ ಜೋಶಿ ಅವರು ತಿಳಿಸಿದರು.

ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಮಂದಿರದ ದಾನ ಪೆಟ್ಟಿಗೆಯ ಕಾಣಿಕೆಯ ಎಣಿಕೆಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ತೀರ್ಥಕ್ಷೇತ್ರ ನ್ಯಾಸದ (ಟ್ರಸ್ಟ್) ಮನವಿಯ ಮೇರೆಗೆ ನಡೆಯುತ್ತಿರುವ ಎಸ್‌ಐಟಿ (SIT) ಮತ್ತು ಪೊಲೀಸ್ ತನಿಖೆಯು ನಿರ್ಣಾಯಕ ಹಂತವನ್ನು ತಲುಪಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಲಾಯಿತು.
ಭವಿಷ್ಯದಲ್ಲಿ ಇಂತಹ ಯಾವುದೇ ಘಟನೆಗಳು ಮರುಕಳಿಸದಂತೆ ತೀರ್ಥಕ್ಷೇತ್ರ ನ್ಯಾಸವು ಖಚಿತಪಡಿಸಿಕೊಳ್ಳಬೇಕು, ಇದರಿಂದ ಸಮಸ್ತ ರಾಮಭಕ್ತರ ರಾಮಮಂದಿರದ ಮೇಲಿರುವ ಶ್ರದ್ಧೆ ಮತ್ತು ಆಳವಾದ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಅಪೇಕ್ಷಿಸಲಾಯಿತು ಎಂದರು
ಬೈಠಕ್‌ನಲ್ಲಿ ಪ್ರಸ್ತುತ ಸನ್ನಿವೇಶದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು. ಇದರಲ್ಲಿ ಮುಖ್ಯವಾಗಿ ಜನಗಣತಿಯ ಸಂದರ್ಭದ ಮಾಹಿತಿ ಮತ್ತು ಜನಸಂಖ್ಯಾ ಅಸಮತೋಲನದಿಂದ ಎದುರಾಗುವ ಸವಾಲುಗಳು ಮುಂತಾದ ವಿಷಯಗಳು ಒಳಗೊಂಡಿದ್ದವು. ಡ್ರಗ್‌ಸ್ ಹೆಚ್ಚುತ್ತಿರುವ ದುಷ್ಪರಿಣಾಮಗಳ ಬಗ್ಗೆ ಕಳವಳ ವ್ಯಕ್ತಪಡಿಸುವುದರೊಂದಿಗೆ, ವ್ಯಸನ ಮುಕ್ತಿ ತಡೆಗಾಗಿ ಆದ್ಯತೆಯ ಮೇರೆಗೆ ಪ್ರಯತ್ನಗಳ ಅಗತ್ಯತೆಯ ಕುರಿತು ಮತ್ತು ಸಂತ ಶಿರೋಮಣಿ ರವಿದಾಸ ಮಹಾರಾಜರ 650 ನೇ ಜನ್ಮ ಜಯಂತಿ ವರ್ಷದ ಕಾರ್ಯಕ್ರಮಗಳ ಯೋಜನೆಯ ಕುರಿತು ಚರ್ಚಿಸಲಾಯಿತು.
ಬೈಠಕ್‌ನಲ್ಲಿ ಮಾರ್ಚ್ 2026ರ ನಂತರ ಸಂಘದ ವಿವಿಧ ಸ್ತರಗಳಲ್ಲಿ ನಡೆದ ಪ್ರಶಿಕ್ಷಣ ವರ್ಗಗಳ ವಿಶ್ಲೇಷಣೆ ನಡೆಸಲಾಯಿತು ಎಂದರು.
ಅಖೀಲ ಭಾರತೀಯ ಪ್ರಚಾರ ಪ್ರಮುಖ ಸುನೀಲ್ ಅಂಬೇಕರ್ ಅವರು ಈ ವರ್ಷ ದೇಶಾದ್ಯಂತ ಒಟ್ಟು 83 ಸಂಘ ಶಿಕ್ಷಾ ವರ್ಗ ಮತ್ತು 12 ಕಾರ್ಯಕರ್ತ ವಿಕಾಸ ವರ್ಗಗಳು ಸಂಪನ್ನಗೊಂಡವು. ಇದರಲ್ಲಿ ಒಟ್ಟು 18,842 ಸ್ವಯಂಸೇವಕರು ತರಬೇತಿ ಪಡೆದರು. ಈ ತರಬೇತಿಯಲ್ಲಿ ಶಾಖಾ ಸಂಚಾಲನೆ, ಸಂಘ ಕಾರ್ಯಪದ್ಧತಿ, ಗ್ರಾಮ ವಿಕಾಸ, ಕುಟುಂಬ ಪ್ರಬೋಧನ, ವಿಪತ್ತು ನಿರ್ವಹಣೆ ಮತ್ತು ಪರಿಸರ ಸಂರಕ್ಷಣೆ ಮುಂತಾದ ವಿಷಯಗಳು ಒಳಗೊಂಡಿದ್ದವು.
ಶಾಖೆಗಳ ಸ್ತರದಲ್ಲಿ ಕಾರ್ಯಯೋಜನೆಯ ಅನುಷ್ಠಾನದ ದೃಷ್ಟಿಯಿಂದ ವಿವರವಾಗಿ ಚರ್ಚಿಸಲಾಯಿತು ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಗರಿಷ್ಠ ಶಾಖಾ ವಿಸ್ತಾರ ಯೋಜನೆಯ ಕುರಿತೂ ಚರ್ಚೆ ನಡೆಸಲಾಯಿತು. ಇದರೊಂದಿಗೆ ಶತಾಬಿ ವರ್ಷದ ಅಂಗವಾಗಿ ನಡೆದ ಕಾರ್ಯಕ್ರಮಗಳ ವಿಶ್ಲೇಷಣೆ ಹಾಗೂ ನಿಗದಿಪಡಿಸಲಾದ ಉಳಿದ ಕಾರ್ಯಕ್ರಮಗಳ ಯೋಜನೆಯ ಕುರಿತು ವಿಚಾರ ಮಾಡಲಾಯಿತು. ಶತಾಬ್ಲಿ ವರ್ಷದ ವಿವಿಧ ಕಾರ್ಯಕ್ರಮಗಳ ಮೂಲಕ ಸಂಪರ್ಕಕ್ಕೆ ಬಂದ ಜನರನ್ನು ಸಾಮಾಜಿಕ ಕಾರ್ಯಗಳಲ್ಲಿ ಮತ್ತು ಪಂಚ ಪರಿವರ್ತನೆಯ ವಿಷಯಗಳಲ್ಲಿ ಸಕ್ರಿಯಗೊಳಿಸುವ ಯೋಜನೆಯ ಕುರಿತು ಚರ್ಚಿಸಲಾಯಿತು. 2026-27ನೇ ಸಾಲಿನ ಪೂಜನೀಯ ಸರಸಂಘಚಾಲಕರ ಪ್ರವಾಸದ ಯೋಜನೆಯ ಕುರಿತೂ ಚರ್ಚೆ ನಡೆಯಿತು.
ರಾಷ್ಟ್ರೀಯ ಸ್ವಯಂಸೇವಕ ಸಂಘದ ವಾರ್ಷಿಕ ಅಖಿಲ ಭಾರತೀಯ ಪ್ರಾಂತ ಪ್ರಚಾರಕ್ ಬೈಠಕ್ ಇಂದು ಕರ್ನಾಟಕದ ಬೆಳಗಾವಿಯಲ್ಲಿ ಮುಕ್ತಾಯಗೊಂಡಿತು. ಈ ಬೈಠಕ್‌ನಲ್ಲಿ ಸರಸಂಘಚಾಲಕ ಡಾ. ಮೋಹನ್ ಭಾಗವತ್, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ 226 ಕಾರ್ಯಕರ್ತರು ಉಪಸ್ಥಿತರಿದ್ದರು ಎಂದರು.
