Uncategorized

ಜುಲೈ 25, 26ಕ್ಕೆ ಎಸ್. ಐ.ಆರ್ ಮಹಾ ಅಭಿಯಾನ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಿರಲಿ ಪಕ್ಷದ ಎಲ್ಲಾ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಳ್ಳಲು ಅನಿಲ್ ಬೆನಕೆ ಕರೆ….

Share

ಮುಂಬರುವ ಶನಿವಾರ ಮತ್ತು ಭಾನುವಾರ ಮತದಾರರ ಪಟ್ಟಿ ಪರಿಷ್ಕರಣೆಯ ಸರ್ವೆ (SIR) ಮಹಾ ಅಭಿಯಾನ ನಡೆಯಲಿದ್ದು, ಪಕ್ಷದ ಎಲ್ಲಾ ಹಿರಿಯ ಮತ್ತು ಕಿರಿಯ ಕಾರ್ಯಕರ್ತರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ಮನವಿ ಮಾಡಿದ್ದಾರೆ.”**

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕರೆಯಂತೆ ಮುಂಬರುವ 25 ಮತ್ತು 26ರ ಶನಿವಾರ ಹಾಗೂ ಭಾನುವಾರದಂದು ರಾಜ್ಯಾದ್ಯಂತ ಮತದಾರರ ಪಟ್ಟಿ ಪರಿಷ್ಕರಣೆಯ (SIR) ವಿಶೇಷ ಮಹಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾತನಾಡಿದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ, “ಪಾರದರ್ಶಕ ಮತದಾರರ ಪಟ್ಟಿ ತಯಾರಿಸುವುದು ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯವಾಗಿದ್ದು, ಇದೊಂದು ಪವಿತ್ರವಾದ ಕಾರ್ಯವಾಗಿದೆ. ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯಬಾರದು ಮತ್ತು ಅನರ್ಹರು ಪಟ್ಟಿಯಲ್ಲಿ ಇರಬಾರದು. ಈ ನಿಟ್ಟಿನಲ್ಲಿ ಬಿಜೆಪಿ ಹಳೆಯ ಹಾಗೂ ಹೊಸ ಕಾರ್ಯಕರ್ತರೆಲ್ಲರೂ ಒಗ್ಗೂಡಿ ಈ ಅಭಿಯಾನವನ್ನು ಶೇ. 100ರಷ್ಟು ಯಶಸ್ವಿಗೊಳಿಸಬೇಕು” ಎಂದು ವಿನಂತಿಸಿದರು.

Tags:

error: Content is protected !!