Uncategorized

*ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲಿಸಿ ವಿಜಯಪುರದಲ್ಲೂ ಧರಣಿ ಸತ್ಯಾಗ್ರಹ*

Share

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ, ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಪರಿಸರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಸೋನಂ ವಾಂಗ್ಚುಕ್ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಬೆಂಬಲ ಸೂಚಿಸಿ ವಿಜಯಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಧರಣಿ ಸತ್ಯಾಗ್ರಹ ನಡೆಯಿತು.

ಧರಣಿಯಲ್ಲಿ ಭಾಗವಹಿಸಿದ ಪ್ರತಿಭಟನಾಕಾರರು, ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ, ಪರೀಕ್ಷಾ ನಿರ್ವಹಣೆಯಲ್ಲಿನ ವೈಫಲ್ಯ ಹಾಗೂ ಅಕ್ರಮಗಳನ್ನು ಖಂಡಿಸಿ, ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಪರಿಸರ ಮತ್ತು ಮಾನವ ಹಕ್ಕುಗಳ ಹೋರಾಟಗಾರ ಸೋನಂ ವಾಂಗ್ಚುಕ್ ಕಳೆದ ಹಲವು ದಿನಗಳಿಂದ ನವದೆಹಲಿಯಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರೂ, ಕೇಂದ್ರ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸದೆ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು. ಈ ವೇಳೆ ಹಿರಿಯ ಪತ್ರಕರ್ತ ಅನಿಲ ಹೊಸಮನಿ, ಸಿದ್ದಲಿಂಗ ಬಾಗೇವಾಡಿ ಮಾತನಾಡಿದರು. ರಾಷ್ಟ್ರಪತಿಗಳು ಮಧ್ಯಸ್ಥಿಕೆ ವಹಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಂತೆ ಒತ್ತಾಯಿಸಿದರು. ಧರಣಿಯಲ್ಲಿ ವಿವಿಧ ಸಮಾನ ಮನಸ್ಕ ಸಂಘಟನೆಗಳ ಮುಖಂಡರು, ಹೋರಾಟಗಾರರು, ವಿದ್ಯಾರ್ಥಿಗಳು ಹಾಗೂ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯದ ಪರ ಹೋರಾಟಗಾರರು ಭಾಗವಹಿಸಿದ್ದರು. ಫಯಾಜ್ ಕಲಾದಗಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 

Tags:

error: Content is protected !!