ಖಾನಾಪೂರ ತಾಲೂಕಿನ ನಂದಗಡದಲ್ಲಿ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಲಾಗಿದೆ. ಸಾರ್ವಜನಿಕರು ತಮ್ಮ ದಾಖಲೆಗಳನ್ನು ಸರಿಯಾಗಿ ಇಟ್ಟುಕೊಂಡು ಈ ಪ್ರಕ್ರಿಯೆಯನ್ನು ಯಶಸ್ವಿಗೊಳಿಸುವಂತೆ ಅಧಿಕಾರಿಗಳು ಕೋರಿದ್ದಾರೆ.


ನಂದಗಡ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯಕ್ರಮದಲ್ಲಿ, ಗ್ರಾಮ ಆಡಳಿತಾಧಿಕಾರಿ ಮಹೇಶ್ ಬುರುಡ ಅವರು ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ನಿಖತ್ ಪರ್ಮಿನ್ ತಹಶೀಲ್ದಾರ್ ಅವರಿಗೆ ಫಾರ್ಮೇಟ್ ನೀಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದರು. ಈ ವೇಳೆ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಅಧಿಕಾರಿಗಳು, ಸಾರ್ವಜನಿಕರು ತಮ್ಮ ಅಧಿಕೃತ ದಾಖಲೆಗಳನ್ನು ಸಮರ್ಪಕವಾಗಿ ಇಟ್ಟುಕೊಂಡು, ಈ ಎಸ್.ಐ.ಆರ್ (SIR) ಫಾರ್ಮೇಟ್‌ನಲ್ಲಿ ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ಭರ್ತಿ ಮಾಡುವ ಮೂಲಕ ಪ್ರಕ್ರಿಯೆಗೆ ಸಹಕರಿಸಬೇಕು ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಬಿಎಲ್ಓಗಳಾದ ಮೋಹನ್ ಕೆಳಗೇರಿ, ಕಾವೇರಿ ನಾಯಿಕ ಹಾಗೂ ಗ್ರಾಮ ಸಹಾಯಕ ಇಬ್ರಾಹಿಮ್ ತಹಶೀಲ್ದಾರ್ ಉಪಸ್ಥಿತರಿದ್ದು, ಮತದಾರರ ಪಟ್ಟಿ ಪರಿಷ್ಕರಣೆಯ ಯಶಸ್ಸಿಗಾಗಿ ಶ್ರಮಿಸುತ್ತಿದ್ದಾರೆ.
