ಮಾನವ ಜನ್ಮವು ಅತ್ಯಂತ ಅಮೂಲ್ಯವಾದುದು. ಯುವಜನತೆ ಮಾದಕ ವಸ್ತುಗಳನ್ನು ಸೇವಿಸಿ ತಮ್ಮ ಬದುಕನ್ನು ಹಾಳುಮಾಡಿಕೊಳ್ಳಬಾರದು. ಪ್ರತಿಯೊಬ್ಬರೂ ಸುಂದರ ಹಾಗೂ ಯಶಸ್ವಿ ಜೀವನವನ್ನು ರೂಢಿಸಿಕೊಳ್ಳಲು ಮಾದಕ ವ್ಯಸನದಿಂದ ದೂರವಿರಬೇಕು” ಎಂದು ಹಿರಿಯ ವಕೀಲರು ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕ ಅಧ್ಯಕ್ಷರಾದ ಶ್ರೀಯುತ ಶ್ರೀಪಾಲ್ ಮುನ್ನೊಳ್ಳಿ ಅವರು ಹೇಳಿದರು.

ಚಿಕ್ಕೋಡಿ ಕೆ.ಎಲ್.ಇ ಸಂಸ್ಥೆಯ ಬಸವಪ್ರಭು ಕೋರೆ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ), ಚಿಕ್ಕೋಡಿ ಹಾಗೂ ಕೆ.ಎಲ್.ಇ ಸಂಸ್ಥೆಯ ಬಿ.ಕೆ. ಪದವಿ ಪೂರ್ವ ಮಹಾವಿದ್ಯಾಲಯದ ಜಂಟಿ ಆಶ್ರಯದಲ್ಲಿ ಜೂನ್ 30 ರಂದು ಆಯೋಜಿಸಲಾಗಿದ್ದ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
