Banglore

ಬೆಂಗಳೂರು ಹೊರ ವಲಯದಲ್ಲಿ ಕಲ್ಲು ಕ್ವಾರಿ ಕುಸಿತ; 7 ಕಾರ್ಮಿಕರ ದುರ್ಮರಣ.

Share

ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಸಮೀಪದ ಕಾವೇರಿ ಕ್ರಷರ್‌ನಲ್ಲಿ ನಡೆದ ಭೀಕರ ದುರಂತದಲ್ಲಿ ಏಳು ಕಾರ್ಮಿಕರು ಮೃ*ತಪಟ್ಟಿದ್ದಾರೆ.

ಕಲ್ಲು ಕ್ವಾರಿಯಲ್ಲಿ ಕೆಲಸ ನಡೆಯುತ್ತಿದ್ದ ವೇಳೆ ಮೇಲ್ಭಾಗದಿಂದ ಟ್ರ್ಯಾಕ್ಟರ್ ಸಹಾಯದಿಂದ ಬಂಡೆಯನ್ನು ಜರುಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಬಂಡೆ ನಿಯಂತ್ರಣ ತಪ್ಪಿ ಕೆಳಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದ ಪರಿಣಾಮ, ಸ್ಥಳದಲ್ಲೇ ಏಳು ಮಂದಿ ಸಾ*ವನ್ನಪ್ಪಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಮೃತರು ಬಿಹಾರ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. ಸ್ಥಳೀಯರು ಮೃತದೇಹಗಳನ್ನು ಹೊರತೆಗೆದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ.

ಘಟನಾ ಸ್ಥಳಕ್ಕೆ ತಾವರೆಕೆರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಾರುತಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾಮಗಾರಿ ಗುತ್ತಿಗೆ ಪಡೆದ ಮೇಸ್ತ್ರಿಯನ್ನು ಪೊಲೀಸರು ವಿಚಾರಣೆಗೆ ಕರೆಸಿಕೊಂಡಿದ್ದು, ಅಪಘಾತದ ನಿಖರ ಕಾರಣದ ಕುರಿತು ತನಿಖೆ ಮುಂದುವರಿದಿದೆ.

Tags:

error: Content is protected !!