Athani

ಮನೆ ದುರಸ್ತಿ ವೇಳೆ ಕುಸಿತ, ಮಣ್ಣಿನಡಿ ಸಿಲುಕಿ ಇಬ್ಬರು ಕಾರ್ಮಿಕರ ದುರ್ಮರಣ

Share

ಹಳೆಯ ಮಣ್ಣಿನ ಮನೆಯ ದುರಸ್ತಿ ಕೆಲಸ ನಡೆಸುತ್ತಿದ್ದ ವೇಳೆ ಮೇಲ್ಮುದ್ದೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುರ್ಘಟನೆ ಇಂದು ಬೆಳಿಗ್ಗೆ ಕೂಟ್ಟಲಗಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಕ್ಷ್ಮೀಬಾಯಿ ಬಸಪ್ಪ ನಂದಗೊಂಡ ಎಂಬವರು ಒಬ್ಬರೇ ವಾಸವಾಗಿದ್ದು, ಅವರ ಮಣ್ಣಿನ ಮನೆಯ ದುರಸ್ತಿ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಕೆಲಸ ಮಾಡುತ್ತಿದ್ದ ಮಾದೇವ್ ಕೃಷ್ಣಪ್ಪ ಬಡಿಗೇರ್ (48) ಹಾಗೂ ಸೈಯದ್ ಕೆಂಪವಾಡಿ (32) ಅವರು ಮೇಲ್ಮುದ್ದೆ ಕತ್ತರಿಸುತ್ತಿದ್ದಾಗ ಏಕಾಏಕಿ ಮನೆಯ ಮೇಲ್ಭಾಗ ಕುಸಿದು ಅವರ ಮೈಮೇಲೆ ಬಿದ್ದಿದೆ. ಪರಿಣಾಮ ಇಬ್ಬರೂ ಮಣ್ಣಿನಡಿ ಸಿಲುಕಿಕೊಂಡಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರೂ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.ಸ್ಥಳೀಕ್ಕೆ ಐಗಳಿ ಪೊಲೀಸ್ ಭೇಟಿ ನೀಡಿ ತನಿಖೆ ನಡೆಸಿದ್ದಾರೆ.ಘಟನೆಯಿಂದ ಕೂಟ್ಟಲಗಿ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.ಇಬ್ಬರು ಕಾರ್ಮಿಕರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Tags:

error: Content is protected !!