ತಾಲೂಕಿನ ಯಡೂರ-ಕಲ್ಲೋಳ ಗ್ರಾಮಗಳ ಮಧ್ಯೆ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸೇತುವೆಯ ಬಳಿ ಅಪರಿಚಿತ ಪುರುಷನ ಶವವೊಂದು ಪತ್ತೆಯಾಗಿದೆ.


ನದಿಯ ನೀರಿನಲ್ಲಿ ತೇಲಿ ಬಂದಿರುವ ಶವ ಇದಾಗಿದ್ದು, ಮೃತ ವ್ಯಕ್ತಿಗೆ ಅಂದಾಜು 40 ರಿಂದ 45 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ನೆರೆಯ ಮಹಾರಾಷ್ಟ್ರ ರಾಜ್ಯಕ್ಕೆ ಸೇರಿದ ವ್ಯಕ್ತಿಯ ಶವ ಇರಬಹುದು ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಅಂಕಲಿ ಪಿಎಸ್ಐ ನಂದೀಶ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಶವವನ್ನು ನದಿಯಿಂದ ಹೊರಗೆತ್ತಿ, ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಈ ಘಟನೆಯು ಅಂಕಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಮೃತನ ಗುರುತು ಪತ್ತೆ ಹಚ್ಚಲು ಮುಂದಿನ ತನಿಖೆ ಕೈಗೊಂಡಿದ್ದಾರೆ.
