ಮುಖ್ಯಮಂತ್ರಿಯ ಸ್ಥಾನದಿಂದ ನಿರ್ಗಮಿಸುವ ಮುನ್ನ ಮಧುಸೂದನ್ ವರದಿಯನ್ನು ಸಿದ್ದರಾಮಯ್ಯ ಅವರು ಸ್ವೀಕರಿಸಿದ್ದಾರೆ. ಅದನ್ನ ಈಗೀನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ವಿಧಾನ ಮಂಡಳದ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಮಾಡುತ್ತಾರೆಯೇ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.

ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಾತಿ ಜನಗಣತಿ ವಿಚಾರದಲ್ಲಿ ರಾಜ್ಯ ಸರಕಾರಕ್ಕೆ ಬದ್ಧತೆ, ನಿಲುವು ಇಲ್ಲದಿರುವುದು ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಹಿಂದುಳಿದ ಅಯೋಗದ ಮೇಲೆ ಕಾಂಗ್ರೆಸ್ ಸರಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾಂತರಾಜಗ ವರದಿ ಆಯೋಗ ರಚನೆ ಮಾಡಿ 650 ಕೋಟಿ ರೂ. ಮೀಸಲಿಟ್ಟರು. ಬಳಿಕ ಮಧುಸೂದನ್ ವರದಿ ಅಂಗೀಕರಿಸಬೇಕೆಂದು ಒತ್ತಾಯಿಸಿದಾಗ ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ರಾಜೀನಾಮೆ ಪಡೆದರು.
ಹಿಂದುಳಿದ ಆಯೋಗದ ವರದಿಯ ಬಗ್ಗೆ ಸರಕಾರ ಸುಳ್ಳು ಹೇಳುತ್ತಿದೆ. ಅಧಿಕಾರ ತ್ಯಾಗ ಮಾಡುವ ಕೊನೆಯ ಗಳಿಗೆಯಲ್ಲಿ ಸಿದ್ದರಾಮಯ್ಯ ಹಿಂದುಳಿದ ಆಯೋಗದ ವರದಿಯನ್ನು ಸ್ವೀಕಾರ ಮಾಡಿದ್ದಾರೆ. ಈಗೀನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಅದನ್ನು ಬಿಡುಗಡೆ ಮಾಡುತ್ತಾರೆ ಎನ್ನುವ ಉತ್ತರ ಇಲ್ಲಿಯವರೆಗೆ ಇಲ್ಲ ಎಂದರು.
ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಬೆಳಗಾವಿ ಬಿಜೆಪಿ ನಗರ ಘಟಕದ ಅಧ್ಯಕ್ಷೆ ಗೀತಾ ಸುತಾರ, ಮೇಯರ್ ಪ್ರೀತಿ ಕಾಮಕರ, ಮಾಜಿ ಶಾಸಕ ಸಂಜಯ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
