Khanapur

ಖಾನಾಪುರದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಅದ್ದೂರಿ ಧ್ವಜಾರೋಹಣ, ಸಾಧಕರಿಗೆ ಗೌರವ

Share

ಖಾನಾಪುರ ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಅದ್ದೂರಿಯಾಗಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಹಲಗೇಕರ ಹಾಗೂ ತಹಶೀಲ್ದಾರ್ ದುಂಡಪ್ಪ ಕೋಮಾರ ಭಾಗವಹಿಸಿ, ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಶುಭಾಶಯ ಕೋರಿದರು.

ಖಾನಾಪುರ ತಾಲೂಕು ಆಡಳಿತದ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕಿನ ತಹಶೀಲ್ದಾರ್ ಕಚೇರಿಯಲ್ಲಿ ಶ್ರದ್ಧಾ-ಭಕ್ತಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಖಾನಾಪುರ ಶಾಸಕರಾದ ವಿಠ್ಠಲ ಹಲಗೇಕರ ಅವರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ನಮಸ್ಕರಿಸಿದರು. ತಹಶೀಲ್ದಾರ್ ದುಂಡಪ್ಪ ಕೋಮಾರ ಅವರು ಧ್ವಜಾರೋಹಣ ನೆರವೇರಿಸಿ, ಪೋಲಿಸ್ ಪಡೆಯಿಂದ ಗೌರವ ವಂದನೆ ಸ್ವೀಕರಿಸಿದ ನಂತರ ನೆರೆದಿದ್ದ ಸಾರ್ವಜನಿಕರೆಲ್ಲರೂ ವಂದೇ ಮಾತರಂ ಗೀತೆ ಗಾಯನದೊಂದಿಗೆ ರಾಷ್ಟ್ರಪ್ರೇಮ ಮೆರೆದರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಹಾಗೂ ಸಾಧನೆಗೈದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ತಾಲೂಕಿನ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ರಾಜಕೀಯ ಮುಖಂಡರು, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಹಾಗೂ ನೂರಾರು ಸಾರ್ವಜನಿಕರು ಭಾಗವಹಿಸಿ ಧ್ವಜಾರೋಹಣದ ಸಂಭ್ರಮಕ್ಕೆ ಸಾಕ್ಷಿಯಾದರು.

Tags:

error: Content is protected !!