ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲ್ಲೂಕಿನ ನವನಗರದಲ್ಲಿ ವ್ಯಕ್ತಿಯೊಬ್ಬ ಮನನೊಂದು ಬಾಡಿಗೆ ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಕರಬಸಯ್ಯ ಹಿರೇಮಠ್ ಎಂಬಾತನೆ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯಾಗಿದ್ದಾನೆ. ಪಂಚಾಕ್ಷರಿ ನಗರದ ಕಾಶಿ ಮಠದ ಹತ್ತಿರ ಇರುವ ತಮ್ಮ ಬಾಡಿಗೆ ಮನೆಯಲ್ಲಿಯೇ ಯಾರು ಇಲ್ಲದಾಗ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಇನ್ನೂ ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.
ಈ ಪ್ರಕರಣ ಎಪಿಎಂಸಿ ನವನಗರ ಪೊಲೀಸ್ ಠಾಣೆ ಯಲ್ಲಿ ದಾಖಲಾಗಿದೆ.
