bellari

ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ: ಬಳ್ಳಾರಿಯಲ್ಲಿ ಡಿಸಿ ಕಚೇರಿ ಮುತ್ತಿಗೆಗೆ ಯತ್ನಿಸಿದ ಬಿಜೆಪಿ ನಾಯಕರ ಬಂಧನ

Share

ಬಳ್ಳಾರಿಯಲ್ಲಿ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಡೆಸುತ್ತಿರುವ ಹೋರಾಟ ತೀವ್ರಗೊಂಡಿದೆ. ಕಳೆದ ಐದು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹಲವು ಮುಖಂಡರನ್ನು ಬಂಧಿಸಿದ್ದಾರೆ.

ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ, ಬಿಜೆಪಿ ಜಿಲ್ಲಾಧ್ಯಕ್ಷ ಅನೀಲ್ ನಾಯ್ಡು ನೇತೃತ್ವದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಚಳುವಳಿ ನಡೆಯಿತು. ಕಳೆದ ಐದು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಸಚಿವರು ತಕ್ಷಣವೇ ರಾಜೀನಾಮೆ ನೀಡಬೇಕೆಂದು ಬಿಗಿ ಪಟ್ಟು ಹಿಡಿದರು. ಈ ವೇಳೆ ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಿ ಜಿಲ್ಲಾಧಿಕಾರಿ ಕಚೇರಿಯ ಆವರಣಕ್ಕೆ ನುಗ್ಗಲು ಯತ್ನಿಸಿದಾಗ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತೀವ್ರ ನೂಕಾಟ-ತೂಕಾಟ ಉಂಟಾಯಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಪ್ರಮುಖ ನಾಯಕರನ್ನು ವಶಕ್ಕೆ ಪಡೆದು ವಾಹನಗಳಲ್ಲಿ ಕರೆದೊಯ್ದರು.

Tags:

error: Content is protected !!