BALLARI

ಸಚಿವ ನಾಗೇಂದ್ರ ಬೆಂಬಲಿಸಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆ

Share

ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆಂಬಲಕ್ಕೆ ನಿಂತ ಬಳ್ಳಾರಿಯ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರು ನಗರದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದ್ದಾರೆ. ಬಿಜೆಪಿ ನಾಯಕರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಮನವಿ ಸಲ್ಲಿಸಿದರು.

 

ಬಳ್ಳಾರಿಯಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರ ಬೆಂಬಲಿಗರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ನಗರದ ಸಂಗಮ್ ವೃತ್ತದಿಂದ ರಾಯಲ್ ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿಯವರೆಗೆ ನಡೆದ ಈ ಬೃಹತ್ ರ್ಯಾಲಿಯಲ್ಲಿ ನೂರಾರು ಬೆಂಬಲಿಗರು ಭಾಗವಹಿಸಿದ್ದರು. ಪ್ರತಿಭಟನೆ ವೇಳೆ ಬಿಜೆಪಿ ನಾಯಕರಾದ ಬಿ. ಶ್ರೀರಾಮುಲು ಮತ್ತು ಜನಾರ್ದನ ರೆಡ್ಡಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಅವರ ಪ್ರತಿಕೃತಿ ದಹಿಸಿ ತಮ್ಮ ವಿರೋಧ ದಾಖಲಿಸಿದರು. ಬಿಜೆಪಿ ನಾಯಕರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ನಾಗೇಂದ್ರ ಅವರಿಗೆ ಬೆಂಬಲ ಸೂಚಿಸಿದರು.

Tags:

error: Content is protected !!