Belagavi

ಬೆಳಗಾವಿ: ಮಾಳಮಾರುತಿ ಸಿಪಿಐ ಬಿ.ಆರ್. ಗಡ್ಡೆಕರ್ ಅವರಿಗೆ ರಾಷ್ಟ್ರಪತಿ ಪದಕ ಗೌರವ

Share

ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡ್ಡೆಕರ್ ಅವರ ಅತ್ಯುತ್ತಮ ಸೇವೆಯನ್ನು ಗುರುತಿಸಿ, 2026ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಹಾಗೂ ಅಪರಾಧ ತಡೆಗಟ್ಟುವಿಕೆ ಮತ್ತು ಪತ್ತೆ ಹಚ್ಚುವ ಕಾರ್ಯದಲ್ಲಿ ಅತ್ಯಂತ ದಕ್ಷತೆಯಿಂದ ಸೇವೆ ಸಲ್ಲಿಸಿರುವ ಬೆಳಗಾವಿಯ ಸಿಪಿಐ ಬಿ.ಆರ್. ಗಡ್ಡೆಕರ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಸೈಬರ್ ಅಪರಾಧ ಪ್ರಕರಣಗಳ ತನಿಖೆಯಲ್ಲಿ ವಿಶೇಷ ಪರಿಣತಿ ತೋರಿ, ಪರಿಣಾಮಕಾರಿ ತನಿಖೆ ನಡೆಸಿದ ಅವರ ಸುದೀರ್ಘ ಹಾಗೂ ಶ್ಲಾಘನೀಯ ಸೇವೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ ಈ ಗೌರವ ನೀಡಿದೆ. 2026ನೇ ಸಾಲಿನ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಲ್ಲಿ ರಾಷ್ಟ್ರಪತಿಗಳ ಪದಕಕ್ಕೆ ಭಾಜನರಾದ ಅಧಿಕಾರಿ ಗಡ್ಡೆಕರ್ ಅವರಿಗೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Tags:

error: Content is protected !!