Belagavi

ಬೆಳಗಾವಿ: ಪೋಕ್ಸೊ, NDPS ಕಾಯ್ದೆ ಕುರಿತು ಪೊಲೀಸ್ ಸಿಬ್ಬಂದಿಗೆ ವಿಶೇಷ ತರಬೇತಿ

Share

ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಾರ್ಯಾಲಯದಲ್ಲಿ ಇಂದು ಕಾನೂನು ಅರಿವು ಮೂಡಿಸುವ ವಿಶೇಷ ಕಾರ್ಯಾಗಾರ ನಡೆಯಿತು. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ನಗರ ಪೊಲೀಸ್ ಆಯುಕ್ತ ಭೂಷಣ್ ಬೋರಸೆ ಅವರ ಉಪಸ್ಥಿತಿಯಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಲಾಯಿತು.

ಬೆಳಗಾವಿ ನಗರ ಪೊಲೀಸ್ ಆಯುಕ್ತರವರ ಕಾರ್ಯಾಲಯದ ಸಭಾಂಗಣದಲ್ಲಿ ಇಂದು ಪೋಕ್ಸೊ (POCSO) ಮತ್ತು ಎನ್‌ಡಿಪಿಎಸ್ (NDPS) ಕಾಯ್ದೆಗಳಿಗೆ ಸಂಬಂಧಿಸಿದಂತೆ ಅತ್ಯಂತ ಮಹತ್ವದ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು. ಮಾನ್ಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಈ ಕಾರ್ಯಾಗಾರವನ್ನು ನಡೆಸಿ, ಕಾಯ್ದೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ತನಿಖಾ ಹಂತಗಳಲ್ಲಿ ವಹಿಸಬೇಕಾದ ಜಾಗ್ರತೆಗಳ ಕುರಿತು ಉಪಯುಕ್ತ ಮಾಹಿತಿ ನೀಡಿದರು. ಈ ವೇಳೆ ನಗರ ಪೊಲೀಸ್ ಆಯುಕ್ತರಾದ ಭೂಷಣ್ ಬೋರಸೆ ಹಾಗೂ ಇಲಾಖೆಯ ಹಿರಿಯ ವರಿಷ್ಠಾಧಿಕಾರಿಗಳು ಉಪಸ್ಥಿತರಿದ್ದು, ಭಾಗವಹಿಸಿದ್ದ ಎಲ್ಲಾ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಕಾಯ್ದೆಗಳ ಕಟ್ಟುನಿಟ್ಟಿನ ಪಾಲನೆ ಮತ್ತು ಸಾರ್ವಜನಿಕರೊಂದಿಗೆ ವ್ಯವಹರಿಸುವ ವಿಧಾನಗಳ ಬಗ್ಗೆ ಸೂಕ್ತ ಸಲಹೆ-ಮಾರ್ಗದರ್ಶನ ನೀಡಿದರು.

Tags:

error: Content is protected !!