ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ವಿಜಯ ಕರ್ನಾಟಕ ರಕ್ಷಣಾ ವೇದಿಕೆ (ವಿಕರವೇ) ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಜಾಗೃತಿ ಜಾಥಾ ಸಂಘಟಿಸಲಾಗಿತ್ತು. ನಗರದ ಸನ್ಮಾನ ಹೋಟೆಲ್ನಿಂದ ಆರಂಭಗೊಂಡ ಜಾಥಾವು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದವರೆಗೆ ಸಾಗಿ, ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿತು.


ಯುವಜನತೆ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಯುವ ಉದ್ದೇಶದಿಂದ ಈ ಜಾಥಾ ಹಮ್ಮಿಕೊಳ್ಳಲಾಗಿತ್ತು. ಗಾಂಜಾ, ಚರಸ್ ಸೇರಿದಂತೆ ಯಾವುದೇ ರೀತಿಯ ಮಾದಕ ವಸ್ತುಗಳ ಮಾರಾಟ ಅಥವಾ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ ದೂರು ಸಲ್ಲಿಸಬೇಕೆಂದು ಈ ವೇಳೆ ಕರೆ ನೀಡಲಾಯಿತು. ಈ ಬೃಹತ್ ಜಾಗೃತಿ ಅಭಿಯಾನದಲ್ಲಿ ವಿಕರವೇ ಜಿಲ್ಲಾಧ್ಯಕ್ಷರು, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ತಾಲೂಕು ಪದಾಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.
