Belagavi

ಬೆಳಗಾವಿ: ರಾಷ್ಟ್ರಪತಿ ಪದಕ ವಿಜೇತ ಸಿಪಿಐ ಗಡ್ಡೆಕರ್ ಅವರಿಗೆ ಡಿಜಿಪಿ ಅವರಿಂದ ಸನ್ಮಾನ

Share

ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ಪಡೆದ ಬೆಳಗಾವಿ ಮಹಾನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡ್ಡೆಕರ್ ಅವರನ್ನು ರಾಜ್ಯದ ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ) ಗೌರವಿಸಿ ಸನ್ಮಾನಿಸಿದ್ದಾರೆ.

ಬೆಳಗಾವಿ ನಗರದ ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್. ಗಡ್ಡೆಕರ್ ಅವರ ಅತ್ಯುತ್ತಮ ಸೇವೆಯನ್ನು ಗುರುತಿಸಿ, 2026ರ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳ ಶ್ಲಾಘನೀಯ ಸೇವಾ ಪದಕ ನೀಡಿ ಗೌರವಿಸಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ಅಪರಾಧ ತಡೆಗಟ್ಟುವಿಕೆ ಹಾಗೂ ಸೈಬರ್ ಅಪರಾಧ ಪ್ರಕರಣಗಳ ಪರಿಣಾಮಕಾರಿ ತನಿಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ ಅವರಿಗೆ ಈ ಗೌರವ ಲಭಿಸಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರಪತಿ ಪದಕಕ್ಕೆ ಭಾಜನರಾದ ಸಿಪಿಐ ಗಡ್ಡೆಕರ್ ಅವರನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕರು ವಿಶೇಷವಾಗಿ ಅಭಿನಂದಿಸಿ, ಸನ್ಮಾನ ಗೌರವ ನೆರವೇರಿಸಿದ್ದಾರೆ.

Tags:

error: Content is protected !!