Belagavi

ಬಸವನ ಕುಡಚಿಯಲ್ಲಿ ಶ್ರಾವಣ ಮಾಸದ ಪ್ರಯುಕ್ತ ಮಹಾಪ್ರಸಾದ

Share

ಬೆಳಗಾವಿ ತಾಲೂಕಿನ ಬಸವನ ಕುಡಚಿಯಲ್ಲಿ ಪ್ರತಿವರ್ಷದಂತೆ ಈ ಬಾರಿಯೂ ಶ್ರಾವಣ ಮಾಸದ ಅಂಗವಾಗಿ ಶ್ರೀ ಕಲ್ಮೇಶ್ವರ ಬಸವೇಶ್ವರ ಹಾಗೂ ಬ್ರಹ್ಮದೇವರ ವಿಶೇಷ ಪೂಜಾ ಕಾರ್ಯಕ್ರಮಗಳು ನಿತ್ಯವೂ ಜರುಗುತ್ತಿವೆ.
ಶ್ರಾವಣ ಮಾಸದ ಮೂರನೇ ಸೋಮವಾರವಾದ ಆ. 31, 2026ರಂದು ದೇವಸ್ಥಾನದಲ್ಲಿ ವಿಶೇಷ ಪೂಜೆಯೊಂದಿಗೆ ಮಹಾಪ್ರಸಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದು, ಮಹಾಪ್ರಸಾದ ಸ್ವೀಕರಿಸಬೇಕೆಂದು ದೇವಸ್ಥಾನ ಟ್ರಸ್ಟ್‌ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.

Tags:

error: Content is protected !!