Belagavi

ಬೆಳಗಾವಿ ಜೈಲು ಸಿಬ್ಬಂದಿ ಅಶ್ಲೀಲ ವಿಡಿಯೋ ವೈರಲ್: ಮಾನನಷ್ಟ ಮೊಕದ್ದಮೆ ದಾಖಲು!

Share

ಬೆಳಗಾವಿ ಕೇಂದ್ರ ಕಾರಾಗೃಹದ ಮಹಿಳಾ ಸಿಬ್ಬಂದಿಯೊಬ್ಬರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ಜೈಲು ಸಿಬ್ಬಂದಿಯ ಘನತೆಗೆ ಧಕ್ಕೆ ತಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಜೈಲು ಅಧೀಕ್ಷಕರು ನ್ಯಾಯಾಲಯದ ಮೊಕದ್ದಮೆ ಹೂಡಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.
ಬೆಳಗಾವಿ ಕೇಂದ್ರ ಕಾರಾಗೃಹದಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಅಶ್ಲೀಲ ವೀಡಿಯೋ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಜೈಲು ಸಿಬ್ಬಂದಿಯ ಘನತೆ ಹಾಗೂ ನೌಕರರ ಗೌರವಕ್ಕೆ ಹಾನಿಯಾಗಿದೆ ಎಂದು ಆರೋಪಿಸಿ, ಜೈಲು ಸೂಪರಿಂಟೆಂಡೆಂಟ್ ಅವರು 2ನೇ ಜೆಎಂಎಫ್‌ಸಿ (JMFC) ನ್ಯಾಯಾಲಯದ ಮುಂದೆ ಖಾಸಗಿ ದೂರು ದಾಖಲಿಸಿದ್ದಾರೆ.
ಈ ಕೃತ್ಯ ಎಸಗಿರುವ ಆರೋಪದ ಮೇಲೆ ‘ಸಂಧ್ಯಾ ಇನ್‌ಸ್ಟಾಗ್ರಾಂ’ ಹ್ಯಾಂಡಲ್ ಹೊಂದಿರುವ ವ್ಯಕ್ತಿ ಹಾಗೂ ಸಾಯಿ ಕುಮಾರ್ ಅಲಿಯಾಸ್ ಸುರೇಶ್ ಕುಣಿಗಲ್ ಸೂರಿ ಎಂಬುವವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಕೋರಲಾಗಿದೆ. ಜೈಲಿನ ಒಳಗೆ ನಡೆಯುವ ಇಂತಹ ಅಕ್ರಮ ಚಟುವಟಿಕೆಗಳು ಮತ್ತು ಜೈಲು ಸಿಬ್ಬಂದಿಯ ಗೌರವವನ್ನು ಕಾಪಾಡುವ ನಿಟ್ಟಿನಲ್ಲಿ ನ್ಯಾಯಾಲಯದ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!