ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರದ ಯಾವುದೇ ಪರವಾನಗಿ ಇಲ್ಲದೆ, ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಿ, ಆತನ ಬಳಿಯಿದ್ದ ಲಕ್ಷಾಂತರ ಮೌಲ್ಯದ ವಿವಿಧ ಕಂಪನಿಯ ಮದ್ಯವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ದಿನಾಂಕ: 28/08/2026 ರಂದು ಬೆಳಗಾವಿಯ ಶೇಖ್ ಮೆಡಿಕಲ್ ಕಾಲೇಜು ಹಾಗೂ ಹುಡುಗರ ಹಾಸ್ಟೆಲ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಆರೋಪಿ ಓಂಕಾರ ಬಾಳು ಸಕಟ (27) ಎಂಬಾತ ತನ್ನ ಬೈಕ್‌ನಲ್ಲಿ ಸರ್ಕಾರದ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಸಾರಾಯಿ ಮಾರಾಟ ಮಾಡಲು ನಿಂತಿದ್ದ ವೇಳೆ, ಮಾಳಮಾರುತಿ ಪೊಲೀಸ್ ಠಾಣೆಯ ಪಿಎಸ್‌ಐ ಉದಯ ಪಾಟೀಲ ಹಾಗೂ ಸಿಬ್ಬಂದಿಯವರು ದಾಳಿ ನಡೆಸಿ ಆರೋಪಿಯಿಂದ ವಿವಿಧ ಕಂಪನಿಯ ರಮ್, ವಿಸ್ಕಿ ಹಾಗೂ ಬಿಯರ್ ಸೇರಿದಂತೆ ಒಟ್ಟು 25.67 ಲೀಟರ್‌ಗಳಷ್ಟು ಅಕ್ರಮ ಸಾರಾಯಿ ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಠಿಣ ಕಾನೂನು ಕ್ರಮ ಜರುಗಿಸಿ ತನಿಖೆ ಮುಂದುವರೆಸಲಾಗಿದೆ.
