ಬೆಳಗಾವಿ ಜಿಲ್ಲೆಯಲ್ಲಿ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ದೊರೆತಿದೆ. ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಅಗಸಗಾ ಮತ್ತು ಅಲತಗಾ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಯಿತು.

ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಅಗಸಗಾ ಗ್ರಾಮದಲ್ಲಿ ಅಂದಾಜು 55 ಲಕ್ಷ ರೂಪಾಯಿ ವೆಚ್ಚದ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣಕ್ಕೆ ಕರ್ನಾಟಕ ರಾಜ್ಯ ಸರ್ಕಾರದ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕೀಹೊಳಿ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಿಯಾಂಕ ಸತೀಶ್ ಜಾರಕಿಹೊಳಿ ಹಾಗೂ ಅಪೇಕ್ಸ್ ಬ್ಯಾಂಕ್ ಅಧ್ಯಕ್ಷ ರಾಹುಲ್ ಜಾರಕಿಹೊಳಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಗ್ರಾಮಸ್ಥರಿಗೆ ಸುಸಜ್ಜಿತ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಪ್ರಮುಖ ಹೆಜ್ಜೆಯಾಗಿದೆ.
ಇದೇ ವೇಳೆ, ಅಲತಗಾ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿಷ್ಠಾಪನೆಯ ಭೂಮಿ ಪೂಜೆ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಆಪ್ತ ಸಹಾಯಕ ಪಾಂಡುರಂಗ ಸುಬೇ, ಗ್ರಾಮ ಪಂಚಾಯಿತಿ ಅಧ್ಯಕ್ಷ ಅಮೃತ್ ಮಧ್ಯಾನ್ವರ್, ದೇವಸ್ಥಾನ ಕಮಿಟಿ ಅಧ್ಯಕ್ಷ ಚಂದ್ರಕಾಂತ್ ಧೂಡಂ, ಮುಖಂಡರಾದ ಅಪ್ಪಗೌಡ ಪಾಟೀಲ್, ಸುರೇಶ್ ತಿರುಮಳೆ, ರಾಹುಲ್ ಜಾದವ್, ಚೇತಕ್ ಕಾಂಬಳೆ ಸೇರಿದಂತೆ ಪಂಚಾಯಿತಿ ಉಪಾಧ್ಯಕ್ಷರು, ಸದಸ್ಯರು ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
