Belagavi

ರಾಹುಲ್ ಜಾರಕಿಹೊಳಿ ನೇತೃತ್ವದಲ್ಲಿ ಕುರಿಯಾಳ ಮಹಾಲಕ್ಷ್ಮಿ ದೇವಸ್ಥಾನದ ಕಳಸಾರೋಹಣ: ಗ್ರಾಮದ ಅಭಿವೃದ್ಧಿಗೆ ಬದ್ಧ ಎಂದ ಯುವ ನಾಯಕ

Share

ಬೆಳಗಾವಿ ಜಿಲ್ಲೆಯ ಕಡೋಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಕುರಿಯಾಳ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಕಳಸಾರೋಹಣ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವ ಮುಖಂಡ ರಾಹುಲ್ ಜಾರಕಿಹೊಳಿ ಅವರು ಮುಂಬರುವ ಜಾತ್ರಾ ಮಹೋತ್ಸವಕ್ಕೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

ಕುರಿಯಾಳ ಗ್ರಾಮದಲ್ಲಿ ಕಳಸಾರೋಹಣ ಹಾಗೂ ಮೂಲಸೌಕರ್ಯಗಳ ವಿಸ್ತರಣೆ:
ಕರ್ನಾಟಕ ರಾಜ್ಯ ಸರಕಾರದ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಅವರ ಸುಪುತ್ರಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಸಂಸದರಾದ ಪ್ರಿಯಾಂಕಾ ಜಾರಕಿಹೊಳಿ ಹಾಗೂ ಅವರ ಸುಪುತ್ರ ಯುವ ನಾಯಕ, ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಅಪೇಕ್ಸ್ ಬ್ಯಾಂಕಿನ ಅಧ್ಯಕ್ಷರಾದ ರಾಹುಲ ಜಾರಕಿಹೊಳಿ ಅವರ ಮಾರ್ಗದರ್ಶನ ಹಾಗೂ ನೇತೃತ್ವದಲ್ಲಿ ಕಡೋಲಿ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕುರಿಯಾಳ ಗ್ರಾಮದಲ್ಲಿ ಮಹಾಲಕ್ಷ್ಮಿ ದೇವಸ್ಥಾನದ ಕಳಸಾರೋಹಣ ಸಮಾರಂಭಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಯುವ ಮುಖಂಡ ರಾಹುಲ್ ಜಾರಕಿಹೊಳಿ, ಮುಂದಿನ ವರ್ಷ ಏಪ್ರಿಲ್‌ನಲ್ಲಿ ನಡೆಯಲಿರುವ ದೇವಿಯ ಜಾತ್ರಾ ಮಹೋತ್ಸವದ ಯಶಸ್ಸಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಕಲ್ಪಿಸುವ ಭರವಸೆ ನೀಡಿದರು. ಶಾಸಕರ ನಿಧಿಯಿಂದ ಈಗಾಗಲೇ ನೀಡಲಾದ 10 ಲಕ್ಷ ರೂ. ಜೊತೆಗೆ ಹೆಚ್ಚುವರಿಯಾಗಿ 5 ಲಕ್ಷ ರೂ. ಅನುದಾನವನ್ನು ಒದಗಿಸಿ, ಸಚಿವ ಸತೀಶ ಜಾರಕಿಹೊಳಿ ಅವರ ನೇತೃತ್ವದಲ್ಲಿ ಗ್ರಾಮದ ಸಿ.ಸಿ. ರಸ್ತೆ, ಚರಂಡಿ, ಸಮುದಾಯ ಭವನ, ಕುಡಿಯುವ ನೀರು ಹಾಗೂ ಜಾತ್ರೆಗೆ ಬೇಕಾದ ವಿದ್ಯುತ್ ವ್ಯವಸ್ಥೆ ಸೇರಿದಂತೆ ಸಮಗ್ರ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಪ್ರಸಕ್ತ ವರ್ಷ ಉತ್ತಮ ಮಳೆಯಾಗಿ ರೈತರ ಬೆಳೆಗಳಿಗೆ ಅನುಕೂಲವಾಗಲಿ ಎಂದು ಪ್ರಾರ್ಥಿಸಿದ ಅವರು, ಈ ಭವ್ಯ ಕಾರ್ಯಕ್ರಮಕ್ಕೆ ಆಹ್ವಾನಿಸಿ ಸನ್ಮಾನಿಸಿದ ದೇವಸ್ಥಾನ ಟ್ರಸ್ಟ್ ಕಮಿಟಿಯವರಿಗೆ ಹಾಗೂ ಭಾಗವಹಿಸಿದ್ದ ಎಲ್ಲಾ ಭಕ್ತಾದಿಗಳಿಗೆ ಕೃತಜ್ಞತೆಗಳನ್ನು ಅರ್ಪಿಸಿದರು.

ದೇವಸ್ಥಾನ ಅಭಿವೃದ್ಧಿ ಮತ್ತು ಸಮಗ್ರ ಗ್ರಾಮ ವಿಕಾಸಕ್ಕೆ ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಶ್ರಮ:
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರ ಆಪ್ತ ಸಹಾಯಕರು ಹಾಗೂ ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ್ ಅವರು, ಗ್ರಾಮದಲ್ಲಿನ ದೇವಸ್ಥಾನಗಳ ಅಭಿವೃದ್ಧಿ ಮತ್ತು ಸಮುದಾಯ ಭವನ ನಿರ್ಮಾಣ ಕಾರ್ಯಕ್ಕೆ ಇಡಲಾದ ಬೇಡಿಕೆಯನ್ನು ಈ ಭಾಗದ ಶಾಸಕರು ಮಾಡಿದ್ದಾರೆ. ಅಲ್ಲದೇ ರಸ್ತೆಗಳ ಅಭಿವೃದ್ಧಿ, ಇನ್ನುಳಿದ ಕೆಲಸಕಾರ್ಯಗಳಿಗೆ ಬದ್ಧರಾಗಿರುವುದಾಗಿ ತಿಳಿಸಿದರು. ಮುಂಬರುವ ಶ್ರೀ ಮಹಾಲಕ್ಷ್ಮೀ ಜಾತ್ರೆಗೆ ಬೇಕಾದ ಮೂಲ ಸೌಕರ್ಯ ನೀಡಲು ಸಚಿವ ಸತೀಶ್ ಜಾರಕಿಹೊಳಿ ಅವರು ಬದ್ಧರಾಗಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ಮಲಗೌಡ ಪಾಟೀಲ್, ರಾಮಣ್ಣ ಗೂಳಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ದೇವಸ್ಥಾನ ಕಮಿಟಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.

Tags:

error: Content is protected !!