ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ ಅವರ ತಾಯಿ ಶ್ರೀಮತಿ ಮಾಲತಿ ಬಾಳಪ್ಪ ನಾವಲಗಟ್ಟಿ ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಇವರ ಅಗಲಿಕೆಗೆ ಜಿಲ್ಲೆಯ ರಾಜಕೀಯ ಹಾಗೂ ಸಾಮಾಜಿಕ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.

ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಅವರ ತಾಯಿಯವರಾದ ಶ್ರೀಮತಿ ಮಾಲತಿ ಬಾಳಪ್ಪ ನಾವಲಗಟ್ಟಿ ಅವರು ಇಂದು ನಿಧನರಾಗಿದ್ದು, ಅವರ ಅಂತಿಮ ವಿಧಿವಿಧಾನಗಳು ಮತ್ತು ಅಂತ್ಯಕ್ರಿಯೆ ಕಾರ್ಯವು ಇಂದು ದಿನಾಂಕ 27/08/2026ರಂದು ರಾತ್ರಿ 8:00 ಗಂಟೆಗೆ ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ನೆರವೇರಲಿದೆ.
